ಬೆಂಗಳೂರು: ಶಾರದಾ ಪ್ರತಿಷ್ಠಾನ (ನಾಗರಭಾವಿ) ವತಿಯಿಂದ ಲೇಖಕಿ ಪ್ರಸನ್ನ ಕುಮಾರ್ ಎಸ್.ಆರ್. ಅವರ ನೂತನ ಕಥಾಸಂಕಲನ 'ಅತಂತ್ರ' ಪುಸ್ತಕ ಬಿಡುಗಡೆ ಸಮಾರಂಭವನ್ನು ಜುಲೈ 25 ರ ಶನಿವಾರ ಬೆಳಿಗ್ಗೆ 10:30ಕ್ಕೆ ನಗರದ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ (3ನೇ ಮಹಡಿ) ಆಯೋಜಿಸಲಾಗಿದೆ.
ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಪ್ರೊ. ಉಪಕುಲಪತಿ ಡಾ. ಕೆ.ವೈ. ನಾರಾಯಣಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ನಾಡೋಜ ಕುಂ. ವೀರಭದ್ರಪ್ಪ ಕೃತಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ರಂಗಕರ್ಮಿ ಡಾ. ಬೇಲೂರು ರಘುನಂದನ್ ಕೃತಿಯ ಕುರಿತು ಮಾತನಾಡಲಿದ್ದು, ಬಳ್ಳಾರಿಯ ಲೋಹಿಯಾ ಪ್ರಕಾಶನದ ಶ್ರೀ ಚನ್ನಬಸವಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಎಂ. ಪ್ರಕಾಶಮೂರ್ತಿ, ದಿ ನರ್ಸರಿಮೆನ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಜೆ. ರವಿಪ್ರಕಾಶ್ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಜಿ.ಪಿ.ಓ. ಚಂದ್ರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಲೇಖಕಿ ಪ್ರಸನ್ನ ಕುಮಾರ್ ಎಸ್.ಆರ್. ಉಪಸ್ಥಿತರಿರಲಿದ್ದು, ಮಾಗಡಿ ಗಿರೀಶ್ ಸ್ವಾಗತಿಸಲಿದ್ದಾರೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


