​ಕೆನರಾ ಸಿಬಿಎಸ್ ಇ ಶಾಲೆಯಲ್ಲಿ HPV ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ

Upayuktha
0



ಮಂಗಳೂರು: ​ಕೆನರಾ ಹೈಸ್ಕೂಲ್ ಸಿಬಿಎಸ್‌ಇ ಶಾಲೆಯ ಇಂಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಮಂಗಳೂರು ಮೆಟ್ರೋ ಇವುಗಳ ಜಂಟಿ ಆಶ್ರಯದಲ್ಲಿ 14-07-2026 ರಂದು ಭುವನೇಂದ್ರ ಸಭಾ ಭವನದಲ್ಲಿ 'HPV ಲಸಿಕೆ' ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಮಂಗಳೂರು ​ಬಂದರ್‌ ವಲಯದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕರಾದ ಡಾ. ಗಣೇಶ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, HPV ಲಸಿಕೆಯ ಮಹತ್ವದ ಬಗ್ಗೆ ಮಾತನಾಡಿದರು.


​ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ. ಸಿಂಚನಾ ಭಟ್ ಅವರು HPV ಲಸಿಕೆಯ ಪ್ರಾಮುಖ್ಯತೆ ಮತ್ತು ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಿಕೆಯ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.


​ರೋಟರಿ ಕ್ಲಬ್ ಮಂಗಳೂರು ಮೆಟ್ರೋ ಅಧ್ಯಕ್ಷರಾದ ಶ್ರೀ ಶ್ಯಾಮ್ ಪ್ರಕಾಶ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿನಿಯರು ಆರೋಗ್ಯ ಮುನ್ನೆಚ್ಚರಿಕೆಯ ಬಗ್ಗೆ ಕಾಳಜಿ ವಹಿಸಬೇಕೆಂದು ಕರೆ ನೀಡಿದರು.


​ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಬಂದರ್ ವಲಯದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕರುಗಳಾದ ಶ್ರೀ ಪ್ರದೀಪ್, ಶ್ರೀ ಗಣೇಶ್ ಮತ್ತು ಡಾ. ಸೌಭಾಗ್ಯ, ರೋಟರಿ ಕ್ಲಬ್ ನ ಇತರ ಸದಸ್ಯರು, ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


​ಒಟ್ಟಾರೆಯಾಗಿ ಈ ಕಾರ್ಯಕ್ರಮವು ಅತ್ಯಂತ ಉಪಯುಕ್ತವಾಗಿದ್ದು  ವಿದ್ಯಾರ್ಥಿಗಳಿಗೂ, ಪೋಷಕರಿಗೂ ಸ್ಪಷ್ಟ ಮಾಹಿತಿ ದೊರಕುವಲ್ಲಿ ಸಹಕಾರಿಯಾಗಿದೆ. ಸಂಪೂರ್ಣ ಕಾರ್ಯಕ್ರಮವು ಸಂವಾದಾತ್ಮಕವಾಗಿ ಮೂಡಿಬಂದಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top