ಸುರತ್ಕಲ್: "ಮಂಗಳೂರಿನ ಸುರತ್ಕಲ್ ಸಮೀಪದ ಮುಕ್ಕದಲ್ಲಿ 8 ಮಂದಿ ಬಾಂಗ್ಲಾದೇಶಿಗಳು ಕೂಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿ, ಅನಧಿಕೃತ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಘಟನೆ ರಾಜ್ಯದ ಭದ್ರತೆಗೆ ಎಚ್ಚರಿಕೆಯ ಗಂಟೆಯಾಗಿದೆ. ಇಂತಹ ಅಕ್ರಮ ನುಸುಳುವಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ಇದರ ಪರಿಣಾಮ ಭೀಕರವಾಗಿರುತ್ತದೆ. ಬಾಂಗ್ಲಾದೇಶಗರನ್ನು ಹೊರಹಾಕಲು ಕೇಂದ್ರ ಸರಕಾರದ ಜೊತೆ ರಾಜ್ಯ ಸರಕಾರ ಕೈಜೋಡಿಸಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಸರಕಾರವನ್ನು ಒತ್ತಾಯಿಸಿದ್ದಾರೆ.
ದುರದೃಷ್ಟವಶಾತ್ ರಾಜ್ಯದ ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಅವರು ಕೇವಲ RSS, RSS ಎಂದು ಕನವರಿಸುವ ಬದಲು ಮಾಡುವ ಬದಲು ದೇಶಕ್ಕೆ ನೇರ ಬೆದರಿಕೆಯಾಗಿರುವ ಇಂತಹ ಪ್ರಕರಣಗಳನ್ನು ಪತ್ತೆಹಚ್ಚುವತ್ತ ಗಮನ ಕೊಡಬೇಕು. ಈ ಬಾಂಗ್ಲಾದೇಶಿಗಳಿಗೆ ಅನಧಿಕೃತ ಆಧಾರ ಕಾರ್ಡ್ ಸೇರಿದಂತೆ ಎಲ್ಲಾ ಸೌಲಭ್ಯ ಒದಗಿಸಿಕೊಟ್ಟ ಏಜೆಂಟ್‌ಗಳು ಮತ್ತು ಅಧಿಕಾರಿಗಳ ಮೇಲೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಕೂಡಲೇ ಮುಂದಾಗಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಕರಾವಳಿಯ ಜನರ ಜೀವ ಮತ್ತು ಸುರಕ್ಷತೆ ಬಲಿಯಾಗುತ್ತದೆ. ರಾಜ್ಯದ ಗೃಹ ಸಚಿವಾಲಯ ಇದರ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಿ ಗಂಭೀರ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpg)
