ಬಂಟ್ವಾಳ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಜುಲೈ 17, ಶುಕ್ರವಾರ) ಮಧ್ಯಾಹ್ನ 02:00 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ 'ಅಮೃತ್ ಭಾರತ್ ನಿಲ್ದಾಣ ಯೋಜನೆ'ಯಡಿ ಪುನರಾಭಿವೃದ್ಧಿಗೊಂಡಿರುವ ಬಂಟ್ವಾಳ ರೈಲು ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ರೈಲ್ವೆ ಸಚಿವಾಲಯದ ರೈಲ್ವೆ ಮಂಡಳಿಯ ಅಧ್ಯಕ್ಷರು ಮತ್ತು ಸಿಇಒ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದ್ದಾರೆ.
ಈ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹೋಟ್, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಉಪಸ್ಥಿತರಿರಲಿದ್ದಾರೆ. ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟ್ವಾಳದ ವಿಧಾನ ಸಭೆ ಸದಸ್ಯ ಯು. ರಾಜೇಶ್ ನಾಯಕ್ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ ವಿಧಾನ ಪರಿಷತ್ ಸದಸ್ಯರುಗಳಾದ ಐವನ್ ಡಿ'ಸೋಜಾ, ಮಂಜುನಾಥ ಭಂಡಾರಿ, ಎಸ್. ಎಲ್. ಭೋಜೇಗೌಡ, ಡಾ. ಧನಂಜಯ ಸರ್ಜಿ ಮತ್ತು ಕಿಶೋರ್ ಬಿ.ಆರ್. ಹಾಗೂ ಮಾವಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕೆ ಅವರು ಉಪಸ್ಥಿತರಿರಲಿದ್ದಾರೆ.
ಈ ಸಮಾರಂಭದ ಸಿದ್ಧತೆಗಳ ಮೇಲ್ವಿಚಾರಣೆಯನ್ನು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ನಡೆಸಿದ್ದು, ಕಾರ್ಯಕ್ರಮಕ್ಕೆ ಆಗಮಿಸಲು ಕೋರಿದ್ದಾರೆ. ಉದ್ಘಾಟನಾ ಕಾರ್ಯಕ್ರಮವು ಜುಲೈ 17, 2026ರ ಶುಕ್ರವಾರದಂದು ಮಧ್ಯಾಹ್ನ 02:00 ಗಂಟೆಗೆ ಬಂಟವಾಳ ರೈಲು ನಿಲ್ದಾಣದಲ್ಲಿ ಜರುಗಲಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

