ಮಂಗಳೂರು: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಇಲ್ಲಿನ ಅನುದಾನಿತ ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ಸುಮಾರು 25 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶಾಲಾ ಮುಂಭಾಗದ ಪ್ರಾಂಗಣಕ್ಕೆ ಶೀಟು ಅಳವಡಿಸುವ ಯೋಜನೆಗೆ ಸೋಮವಾರ ಅಧಿಕೃತ ಚಾಲನೆ ನೀಡಲಾಯಿತು. ಸಂಘದ ಹಿರಿಯ ಸದಸ್ಯರು, ಶಾಲೆಯ ಮಾಜಿ ಸಂಚಾಲಕರು ಹಾಗೂ ಮಾರ್ಗದರ್ಶಕರಾದ ಎಚ್.ಯು. ಅನಂತಯ್ಯನವರು ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಿದ್ದ ಹಿಂದು ವಿದ್ಯಾದಾಯಿನೀ ಸಂಘದ ಮಾನ್ಯ ಅಧ್ಯಕ್ಷ ಜಯಚಂದ್ರ ಹತ್ವಾರ್ ಅವರು ಮಾತನಾಡಿ, ಶಾಲಾ ಮಕ್ಕಳ ರಕ್ಷಣೆಯ ದೃಷ್ಟಿಯಿಂದ ನಿರ್ಮಾಣಗೊಳ್ಳಲಿರುವ ಶೀಟು ಅಳವಡಿಸುವ ಕಾರ್ಯವು ಅತ್ಯಂತ ಅವಶ್ಯಕವಾಗಿದ್ದು, ಈ ಯೋಜನೆಯು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಹಿಂದು ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಶ್ರೀರಂಗ, ನಿಕಟಪೂರ್ವ ಕಾರ್ಯದರ್ಶಿ ಎಂ. ವೆಂಕಟ್ರಾವ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್. ಶ್ರೀಧರ್, ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನಯ ಆಚಾರ್, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಪ್ರಭಾಕರ್ ಕುಳಾಯಿ ಮತ್ತು ಹಿಂದು ವಿದ್ಯಾದಾಯಿನೀ ಸಂಘದ ಜೊತೆ ಕೋಶಾಧಿಕಾರಿ ಟಿ.ಎನ್. ರಮೇಶ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪ್ರಕಾಶ್ ಎಂ. ಕರ್ಕೇರ, ಹಿಂದು ವಿದ್ಯಾದಾಯಿನೀ ಸಂಘದ ಸದಸ್ಯ ಪ್ರಸಿದ್ಧ, ಶಾಲಾಭಿವೃದ್ಧಿ ಸಮಿತಿ ಸಂಚಾಲಕ ಯೋಗೀಶ್ ಸನಿಲ್ ಕುಳಾಯಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಳಾಯಿ ಇದರ ಗೌರವ ಅಧ್ಯಕ್ಷ ಕೆ.ಪಿ. ಚಂದ್ರಶೇಖರ್, ಶಾಲೆಯ ನಿವೃತ್ತ ಶಿಕ್ಷಕ ಶ್ರೀಧರ್ ಭಟ್, ಮಾಜಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶ್ರೀನಿವಾಸ ಕುಳಾಯಿ, ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ, ಪ್ರಸನ್ನ ಮೈರ್ಪಾಡಿ ಹಾಗೂ ಶ್ರೀಮತಿ ಕಮಲಮ್ಮ ಭಾಗವಹಿಸಿದ್ದರು.
ಶಾಲಾ ಸಂಚಾಲಕಿ ಶ್ರೀಮತಿ ಕೆ. ಕಲಾವತಿ ಎಲ್ಲರನ್ನೂ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕ ಗೋಪಾಲ್ ವಿ. ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


