ಬಂಟ್ಸ್ ಹಾಸ್ಟೇಲ್: ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ; ಗಣಪತಿ ದೇವರ ವಿಗ್ರಹದ ಮುಹೂರ್ತ, ಕಚೇರಿ ಉದ್ಘಾಟನೆ

Upayuktha
0




ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸೆಪ್ಟಂಬರ್ 14 ರಿಂದ 16 ರ ವರೆಗೆ 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ನಡೆಯಲಿದ್ದು, ಜುಲೈ 15 ರಂದು ಶರವು ರಾಧಾಕೃಷ್ಣ ದೇವಸ್ಥಾನದಲ್ಲಿ ಗಣಪತಿ ದೇವರ ವಿಗ್ರಹದ ಮುಹೂರ್ತ ಸಮಾರಂಭ ನಡೆಯಿತು. ಸಿದ್ದಿ ವಿನಾಯಕ ಪ್ರತಿಷ್ಠಾನದ ಮೆನೇಂಜಿಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ, ಡಾ ಆಶಾಜ್ಯೋತಿ ರೈ ದಂಪತಿಗಳು  ಪೂಜಾ ವಿಧಿವಿಧಾನಗಳಲ್ಲಿ ಭಾಗವಹಿಸಿದ್ದರು. ಬಳಿಕ ಶ್ರೀ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.


ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಕೃಷ್ಣಪ್ರಸಾದ್ ರೈ, ಶೆಡ್ಡೆ ಮಂಜುನಾಥ ಭಂಡಾರಿ,  ಬಾಲಕೃಷ್ಣ ಶೆಟ್ಟಿ ಲಾನ್ಸ್ ವೇ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಬಂಟರ ಯಾನೆ ನಾಡವರ  ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಎಮ್ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ,  ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಬಂಟರ ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು.


ಕಚೇರಿ ಉದ್ಘಾಟನೆ

ಗಣೇಶೋತ್ಸವ ಸಮಿತಿಯ ಕಚೇರಿ  ಉದ್ಘಾಟನೆ ಬಂಟ್ಸ್ ಹಾಸ್ಟೇಲ್ ನಲ್ಲಿರುವ ಮಾತೃಸಂಘದ ಕಚೇರಿ ಬಳಿ ನಡೆಯಿತು.

ಉದ್ಘಾಟನೆಯನ್ನು ಶಶಿಕಲಾ ಸುಂದರ್ ಶೆಟ್ಟಿ, ಶಾಲಿನಿ ಎಸ್ ಶೆಟ್ಟಿ, ಸಂಗೀತಾ ಗಣೇಶ್ ಶೆಟ್ಟಿ, ಮಲ್ಲಿಕಾ ಪ್ರಸಾದ್ ಶೆಟ್ಟಿ, ಶಶಿ ಸುಭಾಷ್ ರೈ ನೆರವೇರಿಸಿದರು.

ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ ಸದಾಶಿವ ಶೆಟ್ಟಿ, ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಬಂಟರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಬಿಜೈ ಜಗಧೀಶ್ ಶೆಟ್ಟಿ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top