ಗಾಂಧಿ ಪಾರ್ಕ್ ಮಣ್ಣಗುಡ್ಡದಲ್ಲಿ ಕೆನರಾ ಶಾಲೆ ವಿದ್ಯಾರ್ಥಿಗಳಿಂದ ಸಂಭ್ರಮದ ವನಮಹೋತ್ಸವ ಆಚರಣೆ

Upayuktha
0

 




ಮಂಗಳೂರು: ನಗರದ ಮಣ್ಣಗುಡ್ಡ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ಕೆನರಾ ಶಾಲೆ ಡೊಂಗರಕೇರಿಯ ವತಿಯಿಂದ ಇಂದು (ಜುಲೈ 9) ವನಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮವನ್ನು ಮಂಗಳೂರು ಉತ್ತರ ವಲಯ ಕ್ಷೇತ್ರ ಸಂಪನ್ಮೂಲ ಕೇಂದ್ರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಬಿಆರ್‌ಪಿ ಶ್ರೀಮತಿ ವೀಣಾ, ಮಂಗಳೂರು ಉತ್ತರ ವಲಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಪ್ರಸಾದ್ ನಲ್ಲೂರು,ಕಾರ್ಪೊರೇಟರ್ ಶ್ರೀಮತಿ ಸಂಧ್ಯಾ ಆಚಾರ್ಯ, ಸಹಾಯಕ ಕಾರ್ಯಪಾಲಕ ಅಭಿಯಂತರರು (ಪ್ರಭಾರ) ಮಿಥುನ್, ಕೆನರಾ ಆಡಳಿತ ಮಂಡಳಿಯ ಗೌರವ ಉಪಾಧ್ಯಕ್ಷರು ಹಾಗೂ ಕೆನರಾ ಶಾಲೆಯ ಸಂಚಾಲಕರಾದ ಕೆ. ಸುರೇಶ್ ಕಾಮತ್, ಸಸಿಗಳನ್ನು ನೆಡುವ ಮೂಲಕ ಉದ್ಘಾಟಿಸಿದರು.


ಸಭೆಯನ್ನುವುದ್ದೇಶಿಸಿ ಮಾತನಾಡಿದ ಗಣ್ಯರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ವಿದ್ಯಾರ್ಥಿಗಳು ಕೇವಲ ಸಸಿಗಳನ್ನು ನೆಡುವುದಷ್ಟೇ ಅಲ್ಲದೆ ಅವುಗಳನ್ನು ಪೋಷಿಸಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಕೆನರಾ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕವಿತಾ ಮೌರ್ಯ, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು  ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕೆನರಾ ಪ್ರೌಢಶಾಲೆಯ ಪರಿಸರ ಸಂಘದ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಲ್ಲಿ ಪರಿಸರದ ಮಹತ್ವ ಹಾಗೂ ಅದನ್ನು ಹೇಗೆ ಸಂರಕ್ಷಿಸಬೇಕು ಎಂಬ ಕುರಿತು ಜಾಗೃತಿ ಮೂಡಿಸಿದರು. ಜೊತೆಗೆ ಎಲ್ಲರೂ ಪರಿಸರವನ್ನು ಸಂರಕ್ಷಿಸಿ, ಅದರ ಕಾಳಜಿ ವಹಿಸುವುದಾಗಿ ಪ್ರತಿಜ್ಞೆಯನ್ನು ಸ್ವೀಕರಿಸಿದರು. 


ವನಮಹೋತ್ಸವವು ಯುವ ಮನಸ್ಸುಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಹಾಗೂ ಜವಾಬ್ದಾರಿಯುತ ಮನೋಭಾವ ಬೆಳೆಸುವ ಯಶಸ್ವಿ ಕಾರ್ಯಕ್ರಮವಾಗಿ ಮೂಡಿಬಂದಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top