ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗೆ ಆಹ್ವಾನ

Upayuktha
0

 


ದಾವಣಗೆರೆ: ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಿಸುವ ಯೋಜನೆ ಹಮ್ಮಿಕೊಂಡಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಸಿ.ಆರ್. ವಿರೂಪಾಕ್ಷಪ್ಪ ತಿಳಿಸಿದ್ದಾರೆ. 


ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಮುದಾಯದ ಮಕ್ಕಳಿಗೆ ಸಾರ್ವಜನಿಕವಾಗಿ ಕೊಡಮಾಡುವ ವಿದ್ಯಾರ್ಥಿ ವೇತನಕ್ಕೆ ಶೇ.90 ರಷ್ಟು ಅಂಕ ಪಡೆದ ಪ್ರತಿಭಾವಂತ ಮಕ್ಕಳು ಅರ್ಜಿ ಸಲ್ಲಿಸಬಹುದು. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ, ಪ್ರಥಮ, ದ್ವಿತೀಯ ವರ್ಷದ ಪಿ.ಯು.ಸಿ. ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅಂಕಪಟ್ಟಿ ಜೆರಾಕ್ಸ್ ನೊಂದಿಗೆ ಶಾಲಾ/ಕಾಲೇಜಿನ ಪ್ರವೇಶಕ್ಕೆ ಪಾವತಿಸಿದ ಶುಲ್ಕದ ರಶೀದಿಯ ಜೆರಾಕ್ಸ್ ಸಲ್ಲಿಸುವುದು.


ವಿವರಕ್ಕೆ ಸಿ.ಆರ್. ಎರೂಪಾಕ್ಷಪ್ಪ ಅಧ್ಯಕ್ಷರು, ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್, ಚನ್ನಗಿರಿ ರಂಗಪ್ಪ ಗಡಿಯಾರ ಕಂಬದ ಎದುರು, ರೈಲ್ವೆ ಸ್ಟೇಷ್ಟೆನ್ ರಸ್ತೆ, ದಾವಣಗೆರೆ-577001 ಇಲ್ಲಿಗೆ ದಿನಾಂಕ: 24.07.2026 ಹಾಗೂ 25.07.2026 2 ದಿನಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೊದಲು ಬ0ದ 600 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಆಸಕ್ತರು ಸಂಪರ್ಕಿಸಬಹುದು ಎಂದು ಟಸ್ಟ್ನ ಪ್ರಧಾನ ಕಾರ್ಯದರ್ಶಿ ಭರತ್ ಎಸ್. ಚನ್ನಗಿರಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top