ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ, ಸಿಎ ದಿನಾಚರಣೆ

Upayuktha
0


ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ 2026–27ನೇ ಶೈಕ್ಷಣಿಕ ವರ್ಷದ ವಾಣಿಜ್ಯ ಸಂಘದ ಉದ್ಘಾಟನೆ ಹಾಗೂ ಸಿಎ ದಿನಾಚರಣೆಯನ್ನು ಜುಲೈ 1ರಂದು ವಿಜೃಂಭಣೆಯಿಂದ ಆಚರಿಸಲಾಯಿತು.


ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿಯಾದ ಸಿಎ ಅರ್ಜುನ್ ಶೆಣೈ ಭಾಗವಹಿಸಿ ಮಾತನಾಡಿದರು. ಅವರು ಚಾರ್ಟರ್ಡ್ ಅಕೌಂಟೆನ್ಸಿ (ಸಿಎ) ವೃತ್ತಿಯಲ್ಲಿ ಇರುವ ಅಪಾರ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ದೃಢ ಸಂಕಲ್ಪ ಹಾಗೂ ಪರಿಶ್ರಮದಿಂದ ತಮ್ಮ ಗುರಿಯನ್ನು ಸಾಧಿಸುವಂತೆ ಕರೆ ನೀಡಿದರು. ಕಾಲೇಜಿನಲ್ಲಿ ಆಯೋಜಿಸುವ ಶೈಕ್ಷಣಿಕ, ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಆತ್ಮವಿಶ್ವಾಸ, ನಾಯಕತ್ವ ಗುಣಗಳು ಹಾಗೂ ಭವಿಷ್ಯದ ಯಶಸ್ಸಿಗೆ ಅಗತ್ಯವಾದ ಭದ್ರ ಬುನಾದಿ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು. ಅಲ್ಲದೆ, ಪದವಿಪೂರ್ವ ಶಿಕ್ಷಣವೇ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳಿಗೆ ಭದ್ರ ಅಡಿಪಾಯವಾಗಿದೆ ಎಂದು ಹೇಳಿದರು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪ್ರಮೋದ್ ಕುಮಾರ್ ವಾಣಿಜ್ಯ ಸಂಘದ ಉದ್ಘಾಟನೆಗೆ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಕಾಲೇಜು ಒದಗಿಸುವ ಎಲ್ಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ಸಾಧನೆ ಮಾಡುವಂತೆ ಪ್ರೇರೇಪಿಸಿದರು.


ಈ ಸಂದರ್ಭದಲ್ಲಿ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿಯಾಗಿ ಗಮನಾರ್ಹ ಸಾಧನೆ ಮಾಡಿರುವ ಸಿಎ ಅರ್ಜುನ್ ಶೆಣೈ ಅವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಚರಿತ್ರಾ ನಿರೂಪಿಸಿದರು. ವಾಣಿಜ್ಯ ಸಂಘದ ಸಂಯೋಜಕರಾದ ಪ್ರಭಾವತಿ ಕಾರ್ಯಕ್ರಮದ ಆಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಬೇಬಿ ಎನ್ ಹಾಗೂ ಉಪನ್ಯಾಸಕರಾದ ಸವಿತಾ, ಶೋಭಾ ಮತ್ತು ಅಶ್ವಿನಿ ಉಪಸ್ಥಿತರಿದ್ದರು. ವಾಣಿಜ್ಯ ಸಂಘದ ಕಾರ್ಯದರ್ಶಿ ಸುಹಾನ್ ವಂದನಾರ್ಪಣೆ ಸಲ್ಲಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top