ದೇವೇಗೌಡರ ಪತ್ನಿ ಚನ್ನಮ್ಮ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha
0

 


ಉಜಿರೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ತೀವ್ರ ಕಳವಳ ಮತ್ತು ವಿಷಾದ ವ್ಯಕ್ತಪಡಿಸಿದ್ದಾರೆ.

"ಚನ್ನಮ್ಮ ಅವರು ಧರ್ಮಸ್ಥಳದ ಅಪಾರ ಅಭಿಮಾನಿ ಮತ್ತು ಭಕ್ತರಾಗಿದ್ದರು. ಪ್ರತಿ ವರ್ಷವೂ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸುತ್ತಿದ್ದರು. ಅವರ ಮನೆದೇವರು ಕೂಡ 'ಶಿವ' ಆಗಿರುವುದು ವಿಶೇಷವಾಗಿತ್ತು" ಎಂದು ಸ್ಮರಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಶ್ರೀ ಮಂಜುನಾಥ ಸ್ವಾಮಿಯು ಅವರ ಕುಟುಂಬ ವರ್ಗದವರಿಗೆ ಕರುಣಿಸಲಿ ಎಂದು ಡಾ. ಹೆಗ್ಗಡೆ ಅವರು ಪ್ರಾರ್ಥಿಸಿದ್ದಾರೆ.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top