‘ಬ್ರಿಡ್ಜ್ ಮ್ಯಾನ್’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ದಕ್ಷಿಣ ಕನ್ನಡ ಬಿಜೆಪಿ ಸಂತಾಪ

Upayuktha
0


ಮಂಗಳೂರು: ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ದಕ್ಷಿಣ ಕನ್ನಡ ಬಿಜೆಪಿ ಸಂತಾಪ ವ್ಯಕ್ತಪಡಿಸಿದದೆ.


ಪತ್ರಿಕಾ ಪ್ರಕಟಣೆಯಲ್ಲಿ ದ.ಕ. ಜಿಲ್ಲೆ ಬಿಜೆಪಿ ವಕ್ತಾರ ಅರುಣ್ ಜಿ ಶೇಟ್ "ಭಾರತದ “ಬ್ರಿಡ್ಜ್ ಮ್ಯಾನ್” ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನವು ರಾಜ್ಯ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ. ಕಡಿಮೆ ವೆಚ್ಚದಲ್ಲಿ ನೂರಾರು ತೂಗು ಸೇತುವೆಗಳನ್ನು ನಿರ್ಮಿಸಿ, ಗ್ರಾಮೀಣ ಹಾಗೂ ದುರ್ಗಮ ಪ್ರದೇಶಗಳ ಸಾವಿರಾರು ಜನರ ಬದುಕಿಗೆ ಹೊಸ ದಾರಿಯನ್ನು ನಿರ್ಮಿಸಿದ ಅವರ ಸೇವೆ ಸದಾ ಸ್ಮರಣೀಯ. ಇಂಜಿನಿಯರಿಂಗ್ ಪರಿಣತಿಯನ್ನು ಸಮಾಜಸೇವೆಯೊಂದಿಗೆ ಸಂಯೋಜಿಸಿ ಮಾನವೀಯತೆಯ ಜೀವಂತ ಉದಾಹರಣೆಯಾಗಿದ್ದ ಅವರು ಮುಂದಿನ ಪೀಳಿಗೆಗೆ ಶಾಶ್ವತ ಪ್ರೇರಣೆಯಾಗಿದ್ದಾರೆ. ದಿವಂಗತ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ." ಎಂದು ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top