ಗೋವಾ ಕನ್ನಡ ಶಾಲೆಗಳ ರಕ್ಷಣೆಗೆ ಕನ್ನಡ ಸಂಘಟನೆಗಳ ನಿಯೋಗ ಮನವಿ

Upayuktha
0





ಪಣಜಿ: ಗೋವಾ ರಾಜ್ಯದಲ್ಲಿರುವ ಕನ್ನಡ ಶಾಲೆಗಳ ರಕ್ಷಣೆ ಹಾಗೂ ಕನ್ನಡ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಬೋಧನಾ ಮಾಧ್ಯಮವಾಗಿ ಯಥಾಸ್ಥಿತಿಯಲ್ಲಿ ಮುಂದುವರೆಸಿಕೊಂಡು ಹೋಗುವಂತೆ ಆಗ್ರಹಿಸಿ ಗೋವಾದ ವಿವಿಧ ಕನ್ನಡ ಸಂಘಟನೆಗಳ ನಿಯೋಗವು ಗೋವಾ ರಾಜ್ಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಪ್ರಸಾದ ಲೋಲಯೇಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.


ಈ ಸಂದರ್ಭದಲ್ಲಿ ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರ್ ರೆಡ್ಡಿ, ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯ ಘಟಕದ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ ನಾಟೀಕರ್, ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯಾಧ್ಯಕ್ಷ ಬಸವರಾಜ್ ಗೌಡರ್ ರವರ ನೇತೃತ್ವದ ಕನ್ನಡ ಸಂಘಟನೆಗಳ ನಿಯೋಗ ಗೋವಾ ರಾಜ್ಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.


ಗೋವಾದಲ್ಲಿ ಲಕ್ಷಾಂತರ ಕನ್ನಡಿಗರು ನೆಲೆಸಿದ್ದು ಸದ್ಯ ಗೋವಾದಲ್ಲಿ 20 ಕ್ಕೂ ಹೆಚ್ಚು ಕನ್ನಡ ಮಾಧ್ಯಮ ಶಾಲೆಗಳಿವೆ. ಈ ಕನ್ನಡ ಶಾಲೆಗಳಲ್ಲಿ ಸಾವಿರಾರು ಕನ್ನಡಿಗ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸದ್ಯ ಗೋವಾ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದಾಗಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಬೇರೆ ಭಾಷಾ ಮಾಧ್ಯಮ ಬೋಧನಾ ಮಾಧ್ಯಮವನ್ನಾಗಿ ಜಾರಿಗೊಳಿಸಿರುವು ಹೊರ ರಾಜ್ಯದಲ್ಲಿರುವ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಹಾಗೂ ಗೋವಾ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯವಾಗಿದೆ.


 ಹೊರ ರಾಜ್ಯದಲ್ಲಿ ಕನ್ನಡ ವಿದ್ಯಾರ್ಥಿಗಳ ಹಕ್ಕು ರಕ್ಷಿಸಲು ನಮ್ಮ ಕನ್ನಡ ಸಂಘಟನೆಹೋರಾಟ ನಡೆಸಲಿದೆ. ಈ ಸಮಸ್ಯೆಯ ಪರಿಹಾರಕ್ಕೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕನ್ನಡ ಸಂಘಟನೆಗಳು ಒಗ್ಗಟ್ಟಾಗಿ ಹೋರಾಟ ನಡೆಸಲಿದೆ ಎಂದು ಕನ್ನಡಿಗರ ನಿಯೋಗ ಗೋವಾ ಸರ್ಕಾರವನ್ನು ಎಚ್ಚರಿಸಿದೆ.


ಈ ಮನವಿಗೆ ಪ್ರತಿಕ್ರಿಯೆ ನೀಡಿದ ಗೋವಾ ರಾಜ್ಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಪ್ರಸಾದ ಲೋಲಯೇಕರ್- ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರೊಂದಿಗೆ ಈ ಕುರಿತು ಖದ್ದಾಗಿ ಚರ್ಚಿಸಿ ಶೀಘ್ರದಲ್ಲಿಯೇ ನಿರ್ಧಾರವನ್ನು ತಿಳಿಸುವ ಭರವಸೆ ನೀಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top