ಡಿಪ್ಲೋಮ-CET ಪರೀಕ್ಷೆ: ಉಜಿರೆಯ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿಗೆ ಅತ್ಯುತ್ತಮ ರ‍್ಯಾಂಕ್

Upayuktha
0

 


ಉಜಿರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ದ್ವಿತೀಯ ವರ್ಷದ ನೇರ ಇಂಜಿನಿಯರಿಂಗ್ (Lateral Entry) ಪ್ರವೇಶಕ್ಕಾಗಿ ನಡೆಸುವ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್ಗಳನ್ನು ಪಡೆಯುವ ಮೂಲಕ  ವಿಶೇಷ ಸಾಧನೆ ಮೆರೆದಿದ್ದಾರೆ.


ಕಾಲೇಜಿನ  ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಅಭಿಷೇಕ್ ಪ್ರಶಾಂತ್ ರಾಜ್ಯ ಮಟ್ಟದಲ್ಲಿ 59ನೇ ರ‍್ಯಾಂಕ್, ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಶ್ರೇಷ್ಠ ವೈ.ಆರ್. 417 ನೇ ರ‍್ಯಾಂಕ್, ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಧ್ರುವ ಬಿ. ಗೌಡ ಅವರು 624ನೇ ರ‍್ಯಾಂಕ್ ಪಡೆದಿದ್ದಾರೆ. ಉಳಿದಂತೆ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆದು ಕಾಲೇಜಿನ ಸಾಧನೆಗೆ ಮತ್ತಷ್ಟು ಮೆರುಗು ತಂದಿದ್ದಾರೆ.


ವಿದ್ಯಾರ್ಥಿಗಳ ಈ ಸಾಧನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲರು ಸಂತೋಷ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನ ಮನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top