ಉಡುಪಿ: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ಪ್ರತಿಷ್ಠಿತ 'ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ 2025-26' ಕ್ಕೆ ಉಡುಪಿಯ ವೈದ್ಯಕೀಯ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ವಾತ್ಸಲ್ಯ ಕ್ಲಿನಿಕ್ ಡಾ. ರಾಜಲಕ್ಷ್ಮಿ ಅವರ "ವಾತ್ಸಲ್ಯದ ಒಸಗೆ" ಮಹಿಳಾ ಆರೋಗ್ಯ ಸಂಗಾತಿ ಕೃತಿ ಆಯ್ಕೆಯಾಗಿದೆ.
ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಪೂರ್ವಾಧ್ಯಕ್ಷರಾದ ವಾತ್ಸಲ್ಯ ಕ್ಲಿನಿಕ್ ನ ಡಾ. ರಾಜಲಕ್ಷ್ಮಿ ಅವರು ರೋಗಿಗಳ ಬದುಕು, ಭಾವನೆ ಮತ್ತು ಮಾನವೀಯ ಸಂಬಂಧಗಳನ್ನು ಕುರಿತಂತೆ ಬರೆದಿರುವ ಈ ಕೃತಿಯು ಓದುಗರ ಮನಮುಟ್ಟುವಂತಿದೆ.
ಆಗಸ್ಟ್ 23 ಮತ್ತು 24 ರಂದು ದೊಡ್ಡಬಳ್ಳಾಪುರದ ನವೋದಯ ಶಾಲೆಯಲ್ಲಿ ನಡೆಯಲಿರುವ ಕನ್ನಡ ವೈದ್ಯ ಬರಹಗಾರರ 6ನೇ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಶಸ್ತಿಯನ್ನು ಪ್ರಸಿದ್ಧ ಹೃದ್ರೋಗ ತಜ್ಞರು ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್ ಹನಗವಾಡಿ ಅವರು ಪ್ರದಾನ ಮಾಡಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


