ಶಿಕ್ಷಣವು ಭವಿಷ್ಯದ ನಾಯಕರನ್ನು ರೂಪಿಸುತ್ತದೆ: ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ

Upayuktha
0



ಮಂಗಳೂರು: ಕೆನರಾ ಪ್ರೌಢಶಾಲೆ ಉರ್ವ ಇಲ್ಲಿ ಗುರುವಾರದಂದು (ಜು.9) 2026-27 ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿ ಮಂಡಲದ ಪದಗ್ರಹಣ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ಈ ಸಭೆಯ ಮುಖ್ಯ ಅತಿಥಿಗಳು, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.


ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಶಿಕ್ಷಣವು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದಲ್ಲದೆ, ಭವಿಷ್ಯದ ನಾಯಕರನ್ನಾಗಿ ರೂಪಿಸುತ್ತದೆ. ದೇಶಾಭಿಮಾನ, ಕರ್ತವ್ಯ ನಿಷ್ಠೆ, ಶಿಸ್ತು, ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತು ಆ ಮೂಲಕ ಶಾಲೆಯ ಒಳಿತಿಗಾಗಿ, ಸಮಾಜದ ಒಳಿತಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು. 


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಯೋಗೇಶ್ ಆರ್. ಕಾಮತ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲಲನಾ ಜೆ.ಶೆಣೈ ಹಾಗೂ ಹಿರಿಯ ಶಿಕ್ಷಕರಾದ ಶ್ರೀಮತಿ ನಮಿತಾ ಪೂಜಾರಿ ಹಾಗೂ ಮುರಾರಿ ತಂತ್ರಿಯವರು ಉಪಸ್ಥಿತರಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳ ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು. ಬಳಿಕ ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು.


ನೂತನವಾಗಿ ಆಯ್ಕೆಯಾದ ಶಾಲಾ ಮಂತ್ರಿಮಂಡಲದ ಪ್ರತಿನಿಧಿಗಳಿಗೆ ಮುಖ್ಯೋಪಾಧ್ಯಾಯಿನಿಯವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿ ನಾಯಕ ಹಾಗೂ ಉಪನಾಯಕಿ ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುವುದಾಗಿ ಪ್ರತಿಜ್ಞೆ ಮಾಡಿದರು. 


10ನೇ ತರಗತಿ ವಿದ್ಯಾರ್ಥಿ ಸಂಜೀತ್ ಸರ್ವರನ್ನು ಔಪಚಾರಿಕವಾಗಿ ಸ್ವಾಗತಿಸಿದರು. ಮಾನ್ವಿ ವಂದಿಸಿದರು. ಸಾನ್ವಿ ಮೆನೋನ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕರಾದ ಶ್ರೀಮತಿ ಲೀನಾ ಭಟ್ ಹಾಗೂ ಶ್ರೀಮತಿ ಸರಿತಾ ಕೋಟ್ಯಾನ್ ಅವರು ಈ ಕಾರ್ಯಕ್ರಮವನ್ನು ಸಂಘಟಿಸಿದರು. ಬಹಳ ಶಿಸ್ತು ಬದ್ಧವಾಗಿ ನಡೆದ ಈ ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಸಂಪನ್ನಗೊಂಡಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top