ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Upayuktha
0

 ಕೃಷ್ಣಕುಮಾರ್ ಶೆಟ್ಟಿ ಕಡಬ ಅಧ್ಯಕ್ಷ, ವಿಜಯನಾರಾಯಣ ಕೆ.ಎಂ. ಕಾರ್ಯದರ್ಶಿ



ಪುತ್ತೂರು: ಇಲ್ಲಿನ ಪ್ರಸಿದ್ಧ ಶಿಕ್ಷಣ ಸಂಸ್ಥೆ 'ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.)' ಇದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ ಹಾಗೂ ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಅವರು ಮುಂದಿನ 5 ವರ್ಷಗಳ (2026- 2031) ಅವಧಿಗೆ ಆಯ್ಕೆಯಾಗಿದ್ದಾರೆ.


ಜುಲೈ 19ರಂದು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆದ ಸಂಘದ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು.


ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ನಿರ್ದೇಶಕರ ವಿವರ:


ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ, ಕಡಬ; ಉಪಾಧ್ಯಕ್ಷರಾಗಿ ಶ್ರೀಮತಿ ರೂಪಲೇಖಾ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ., ಜತೆ ಕಾರ್ಯದರ್ಶಿಯಾಗಿ ಭರತ್ ಪೈ ಹಾಗೂ ಖಜಾಂಚಿಯಾಗಿ ಸಂತೋಷ್ ಬಿ.


ನಿರ್ದೇಶಕರಾಗಿ: ವಸಂತ ಮಾಧವ ಟಿ., ರವೀಂದ್ರ ಪಿ., ಕರುಣಾಕರ ಸುವರ್ಣ, ಡಾ. ಶ್ರೀಪತಿ ಕಲ್ಲೂರಾಯ, ರಮೇಶ್‌ಚಂದ್ರ ಎಂ., ಶ್ರೀಮತಿ ಮಹಾಲಕ್ಷ್ಮೀ ಕೆ. ಆಯ್ಕೆಯಾಗಿದ್ದಾರೆ.


ಮುಂದಿನ ಐದು ವರ್ಷಗಳ ಕಾಲ (2026-2031) ಈ ನೂತನ ಪದಾಧಿಕಾರಿಗಳು ಹಾಗೂ ನಿರ್ದೇಶಕರ ಮಂಡಳಿಯು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಜವಾಬ್ದಾರಿಯನ್ನು ನಿರ್ವಹಿಸಲಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top