ಸುರತ್ಕಲ್: ಮಕ್ಕಳು ಮೊಬೈಲ್ ಬಳಕೆಯ ದುಷ್ಪರಿಣಾಮ ದ ಕುರಿತು ಅರಿತು ಕೊಳ್ಳ ಬೇಕಾಗಿದೆ. ಸ್ವಯಂನಿಯಂತ್ರಣದೊಂದಿಗೆ ಕಲಿಕೆ, ಕ್ರೀಡೆ, ಕಲಾಸಕ್ತಿಗಳನ್ನು ಬೆಳೆಸಿಕೊಳ್ಳುವ ಅಗತ್ಯ ಇದೆ. ಮಾದಕ ವ್ಯಸನಗಳ ಕುರಿತು ಕುಟುಂಬದೊಳಗಡೆ ಜಾಗೃತಿ ಅಗತ್ಯ. ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವಲ್ಲಿ ಸಹಭಾಗಿ ಗಳು ಎಂದು ಹಿರಿಯ ಮನಃಶಾಸ್ತ್ರಜ್ಞ ಡಾ. ಮನು ಆನಂದ್ ನುಡಿದರು.
ಅವರು ಸುರತ್ಕಲ್ ರೋಟರಿ ಕ್ಲಬ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್ ಚಿತ್ರಾಪುರ ಕುಳಾಯಿಯಲ್ಲಿ ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಮಕ್ಕಳಲ್ಲಿ ಮೊಬೈಲ್ ಗೀಳು ನಿವಾರಣೆ ಮತ್ತು ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜ ದ ಕುರಿತಾಗಿ ಅರಿವು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸುರತ್ಕಲ್ ರೋಟರಿ ಕ್ಲಬ್ ನ ಸ್ಥಾಪಕ ಸದಸ್ಯ ಸತೀಶ್ ರಾವ್ ಇಡ್ಯಾ ಮಾತನಾಡಿ ವಿದ್ಯಾರ್ಥಿಗಳಿಗೆ ಒಳ್ಳೆಯ ವಿಚಾರಗಳ ತಿಳುವಳಿಕೆ ಮೂಡಿಸುವ ಅರಿವಿನ ಕಾರ್ಯಾಗಾರ ಪ್ರತಿಯೊಂದು ಶಾಲೆಗಳಲ್ಲಿಯೂ ನಡೆಯಬೇಕು ಎಂದರು.
ಸುರತ್ಕಲ್ ರೋಟರಿ ಕ್ಲಬ್ ನ ಅಧ್ಯಕ್ಷ ಶ್ರೀಧರ್ ಟಿ. ಎನ್. ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಸದಸ್ಯ ತೇಜಪಾಲಪುತ್ರನ್, ಸುರತ್ಕಲ್ ರೋಟರಿ ಕ್ಲಬ್ ನ ಇಂಟರಾಕ್ಟ್ ಸಂಯೋಜಕ ರಾಮ್ ಮೋಹನ್ ವೈ., ಸದಸ್ಯೆ ಪೂರ್ಣಿಮಾ ಎಸ್. ರಾವ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶಶಿಕಲಾ, ಶಿಕ್ಷಕಿ ರೂಪ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘ ದ ಕಾರ್ಯದರ್ಶಿ ಕೃಷ್ಣ ಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಸುರತ್ಕಲ್ ರೋಟರಿ ಕ್ಲಬ್ ಕಾರ್ಯದರ್ಶಿ ಶ್ರೀನಿವಾಸ ರಾವ್ ಪಾದೆಬೆಟ್ಟು ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


