ಉಡುಪಿ: ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಸರ್ಕಾರಿ ಪ್ರೌಢಶಾಲೆ, ಇಂದಿರಾ ನಗರ, ಉಡುಪಿ ಇವರ ಸಹಯೋಗದಲ್ಲಿ ಇಂದಿರಾ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಸುನೀಲ ತಿ ಮಾಸರಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ಕಾನೂನು ಅರಿವು ಮೂಡಿಸಿದರು.
ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಸುಜಾತ ಬಿ ಕೋರಳ್ಳಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಕಾನೂನು ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಇಂದಿರಾ ನಗರದ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಗಿರೀಶ್ ಎ ನಾಯ್ಕ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಸುಮಂಗಲಾ, ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರಾದ ಪ್ರೇಮಾನಂದ ಶೆಟ್ಟಿಗಾರ್ ಮತ್ತು ಪ್ರಕಾಶ್ ಭಟ್ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

