ಹಾಸನ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಹೊರತರುವುದು ಶಿಕ್ಷಣದ ಗುರುತರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಹತ್ತನೆ ತರಗತಿ ವಿದ್ಯಾರ್ಥಿಗಳಲ್ಲಿ ಕೌಶಲ್ಯದ ಜ್ಞಾನವನ್ನು ಹೆಚ್ಚಿಸುವ ದೃಷ್ಟಿಯಿಂದ ರಂಗೋಲಿಯಲ್ಲಿ ಭಾರತದ ನಕಾಶೆಯನ್ನು ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಎಂದು ಉಪಪ್ರಾಂಶುಪಾಲ ಮಂಜುನಾಥ್ ಹೇಳಿದರು.
ನಗರದ ಆರ್. ಸಿ. ರಸ್ತೆಯಲ್ಲಿರುವ ಜಿಜಿಜೆಸಿ ಪ್ರಧಾನ ಪ್ರೌಢ ಶಾಲಾ ವಿಭಾಗದ ಸಮಾಜ ವಿಜ್ಞಾನ ವಿದ್ಯಾರ್ಥಿ ಸಂಘದ ವತಿಯಿಂದ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಭಾರತದ ನಕ್ಷೆಯನ್ನು ರಂಗೋಲಿಯಲ್ಲಿ ಬಿಡಿಸಿ, ವಿವಿಧ ರಾಜ್ಯಗಳಿಗೆ ವಿವಿಧ ರೀತಿಯ ಬಣ್ಣಗಳನ್ನು ತುಂಬಿರುವುದು ಮಕ್ಕಳ ಕೌಶಲ್ಯ ಜ್ಞಾನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದ್ದು ಈ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುತ್ತಿದೆ ಎಂದು ತಿಳಿಸುತ್ತಾ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಶಾಲೆಯ ಸಮಾಜ ವಿಜ್ಞಾನ ಸಂಘದ ನೋಡಲ್ ಶಿಕ್ಷಕರಾದ ಕೆ.ಎನ್. ಚಿದಾನಂದ ಮಾತನಾಡಿ ಸಮಾಜ ವಿಜ್ಞಾನ ಸಂಘದ ಮೂಲಕ ಪ್ರತೀ ವರ್ಷವೂ ಶಾಲೆಯಲ್ಲಿ ವಿವಿಧ ರೀತಿಯ ಸ್ಪರ್ಧಾ ಚಟುವಟಿಕೆಗಳು ಮತ್ತು ಕಲಿಕಾ ಚಟುವಟಿಕೆಗಳನ್ನು ನಡೆಸುತ್ತಿದೆ. ಆ ಮೂಲಕ ಮಕ್ಕಳಿಗೆ ತಮ್ಮಲ್ಲಿರುವ ಜ್ಞಾನವನ್ನು ತಿಳಿವಳಿಕೆಯಾಗಿ ಪರಿವರ್ತಿಸಿ, ಸೂಕ್ತ ಸಮಯದಲ್ಲಿ ಸಂದರ್ಭೋಚಿತವಾಗಿ ಅನ್ವಯಿಸುವ ಮತ್ತು ಅಗತ್ಯ ಕಲಿಕಾ ಕೌಶಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಜೀವನ ನಡೆಸುವ ಅರಿವನ್ನು ಮೂಡಿಸುತ್ತಿದೆ. ಅಲ್ಲದೇ, ದೇಶದ ಉತ್ತಮ ಪ್ರಜೆಯನ್ನಾಗಿ ರೂಪಿಸುವುದು ಇಂದಿನ ಅನಿವಾರ್ಯವಾಗಿದೆ ಎಂದರು.
ವಿಜೇತ ತಂಡಗಳಿಗೆ ಪುಸ್ತಕ ಮತ್ತು ಪ್ರಶಸ್ತಿ ಪತ್ರಗಳನ್ನು ಪ್ರದಾನ ಮಾಡಲಾಯಿತು. ನೂರ್ ಫಾತೀಮಾ, ನುಸ್ರತ್ ಫಾತೀಮಾ ತಂಡವು ಪ್ರಥಮ ಬಹುಮಾನ, ಉಜ್ಮಕೌಸರ್, ಜೋಯಾ ಫಿರ್ದೋಸ್ ಇವರ ತಂಡ ದ್ವಿತೀಯ ಬಹುಮಾನ ಪಡೆದರೆ, ಸಿದ್ಧಿಕಾ, ಶಾಜಿಯಾಬಾನು ಮತ್ತು ಸೌಜನ್ಯ ಈ ವಿದ್ಯಾರ್ಥಿನಿಯರ ತಂಡವು ಮೂರನೇ ಬಹುಮಾನವನ್ನು ಪಡೆದುಕೊಂಡಿತು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಹೆಚ್.ಪಿ. ಮಂಜಳ, ಎ.ವಿ. ಗೀತಾರಾಣಿ, ರುದ್ರೇಶ್, ಎಂ.ಆರ್ ರಂಗಾಮಣಿ, ಸತ್ಯನಾರಾಯಣ ಮುರಳಿ, ಮಧು ಪಿ., ತೈಬಾಕೌಸರ್, ಚಿದಾನಂದ, ಬಿ.ಇಡಿ. ಪ್ರಶಿಕ್ಷಣಾರ್ಥಿಗಳು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


