ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ, ಧರ್ಮತ್ತಡ್ಕದಲ್ಲಿ 2026–27ನೇ ಶೈಕ್ಷಣಿಕ ವರ್ಷದ ರಕ್ಷಕ-ಶಿಕ್ಷಕ ಸಂಘದ (ಪಿಟಿಎ) ಮಹಾಸಭೆಯು ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಅಶೋಕ್ ಭಂಡಾರಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕುಮಾರ್ ಪಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲೆಯ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಶಾಲಾ ವ್ಯವಸ್ಥಾಪಕರಾದ ಎನ್. ಶಂಕರನಾರಾಯಣ ಭಟ್ ಹಾಗೂ ಹೈಯರ್ ಸೆಕೆಂಡರಿ ಪ್ರಾಂಶುಪಾಲರಾದ ಸತೀಶ್ ಶೆಟ್ಟಿ ಒಡ್ಡಂಬೆಟ್ಟು ಮಾತನಾಡಿದರು.
ಶ್ರೀಮತಿ ಸೌಮ್ಯ ಎಂ ಅವರು 2025–26ನೇ ಶೈಕ್ಷಣಿಕ ವರ್ಷದ ವಾರ್ಷಿಕ ವರದಿಯನ್ನು ಮಂಡಿಸಿದರು. ಬಳಿಕ 2026–27ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ಈ ಸಂದರ್ಭದಲ್ಲಿ ಬದಿಯಡ್ಕ ಅಬಕಾರಿ ವಲಯದ ಅಬಕಾರಿ ಅಧಿಕಾರಿ ಜನಾರ್ಧನ ಎನ್ ಅವರು ವಿದ್ಯಾರ್ಥಿಗಳ ಹದಿಹರೆಯದ ಮಾನಸಿಕ ಹಾಗೂ ದೈಹಿಕ ಬದಲಾವಣೆಗಳು, ಮಾದಕ ದ್ರವ್ಯಗಳ ದುಷ್ಪರಿಣಾಮಗಳು ಮತ್ತು ಪೋಷಕರ ಜವಾಬ್ದಾರಿಗಳ ಕುರಿತು ಮಾಹಿತಿ ಸಮೃದ್ಧ ಉಪನ್ಯಾಸ ನೀಡಿದರು.
ಶಾಲೆಯ ವಿದ್ಯಾರ್ಥಿ ಪೊಲೀಸ್ ಕ್ಯಾಡೆಟ್ (ಎಸ್‌ಪಿಸಿ) ಘಟಕದ ಡಿ ಐ ಆಗಿರುವ ಶ್ರೀಮತಿ ಪ್ರಸೀತಾ ಅವರು ಕೇರಳ ಸರ್ಕಾರ ಮತ್ತು ಅಬಕಾರಿ ಇಲಾಖೆಯ ‘ವಿಮುಕ್ತಿ – ಮಾದಕ ದ್ರವ್ಯ ಮುಕ್ತ ಕೇರಳ’ ಅಭಿಯಾನದ ಉದ್ದೇಶ, ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರ ಪಾತ್ರದ ಕುರಿತು ವಿವರಿಸಿದರು.
ಸಭೆಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವ ಶೈಕ್ಷಣಿಕ ಹಾಗೂ ಸಹಶೈಕ್ಷಣಿಕ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪೋಷಕರಿಂದ ಸಲಹೆ-ಸೂಚನೆಗಳನ್ನು ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ರಮ್ಯಲಕ್ಷ್ಮಿ ಎ ಅವರು ಪ್ರಾರ್ಥನೆಗೀತೆ ಹಾಡಿದರು. ಸಿಬ್ಬಂದಿ ಕಾರ್ಯದರ್ಶಿ ಶ್ರೀಮತಿ ಸುನೀತಾ ಕೆ ಅವರು ಸ್ವಾಗತಿಸಿದರು. ರಕ್ಷಿತ್ ಕುಮಾರ್ ಎಂ ಅವರು ವಂದಿಸಿದರು. ಶ್ರೀಮತಿ ವಿಚೇತಾ ಬಿ ಹಾಗೂ ಹರ್ಷಿತ್ ವಿ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


