ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಯುವ ರೆಡ್ ಕ್ರಾಸ್ ಘಟಕ ಮಾದಕ ದ್ರವ್ಯ ವಿರೋಧಿ ಸಮಿತಿ ಹಾಗೂ ಮಲ್ಪೆ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಮಾಹಿತಿ ನೀಡಿದ ಮಲ್ಪೆ ಪೊಲೀಸ್ ಠಾಣಾಧಿಕಾರಿ ಅರುಣ್ ಕುಮಾರ್ ಇಂದಿನ ಯುವಜನತೆ ಹೆಚ್ಚಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದು ತಮ್ಮ ಆರೋಗ್ಯ ಹಾಳುಮಾಡಿಕೊಳ್ಳುವುದರ ಜೊತೆಗೆ ಸಾಮಾಜಿಕ ಅಪರಾಧಗಳಲ್ಲೂ ತೊಡಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಯುವಜನತೆಯನ್ನು ಮಾದಕ ವ್ಯಸನಗಳಿಂದ ಮುಕ್ತಗೊಳಿಸುವಲ್ಲಿ ಸರಕಾರ ಆಡಳಿತ ವ್ಯವಸ್ಥೆ ಸಾರ್ವಜನಿಕರು, ವಿದ್ಯಾಸಂಸ್ಥೆಗಳು ಒಟ್ಟಾಗಿ ಶ್ರಮಿಸುವ ಅಗತ್ಯವಿದೆ ಎಂದರು.
ಪ್ರಾಂಶುಪಾಲ ನಿತ್ಯಾನಂದ ವಿ ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ಮಾದಕ ವ್ಯಸನ ತಡೆ ಸಮಿತಿ ಸಂಚಾಲಕರಾದ ಡಾ. ರೋಶನ್ ಕುಮಾರ್ ಶೆಟ್ಟಿ, ಸದಸ್ಯರಾದ ಕೃಷ್ಣ ಸಾಸ್ತಾನ, ಮರ್ವಿನ್ ವಿಕ್ಟರ್ ಡಿ ಸೋಜ ಉಪಸ್ಥಿತರಿದ್ದರು. ಮಾದಕ ವ್ಯಸನ ತಡೆ ಸಮಿತಿ ವಿದ್ಯಾರ್ಥಿ ಸದಸ್ಯರುಗಳು ಉಪಸ್ಥಿತರಿದ್ದರು. ಯುವ ರೆಡ್ ಕ್ರಾಸ್ ಸಂಚಾಲಕ ಪ್ರಶಾಂತ್ ನೀಲಾವರ ಕಾರ್ಯಕ್ರಮ ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


