ಮನಪಾ 8ನೇ ವಾರ್ಡ್ ಒಳರಸ್ತೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಗುದ್ದಲಿ ಪೂಜೆ

Upayuktha
0

   


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 8ನೇ ವಾರ್ಡಿನ ಒಳ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಅವರು ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಿದರು.


ಒಟ್ಟು ಎರಡು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು, ಪ್ರಮುಖವಾಗಿ ಶ್ರೀ ಧೂಮಾವತಿ ರಸ್ತೆ ಕಾಂಕ್ರೀಟೀಕರಣ ಮತ್ತು ಚರಂಡಿ ವ್ಯವಸ್ಥೆ, ಎನ್‌ಎಂಪಿಟಿ ಹೌಸಿಂಗ್ ಕಾಲೋನಿ ರಸ್ತೆ ಕಾಂಕ್ರೀಟೀಕರಣ, ಅಣ್ಣಪ್ಪ ರಸ್ತೆ ಕಾಂಕ್ರೀಟೀಕರಣ, ಟಿ.ಕೆ. ಚೌಟ ನಗರ, ಬೃಂದಾವನ ನಗರ, ಶಿವಾಜಿನಗರ ರಸ್ತೆಗಳು ಅಭಿವೃದ್ಧಿಗೊಳ್ಳಲಿವೆ.


ಸ್ಥಳೀಯ ನಿಕಟಪೂರ್ವ ಪಾಲಿಕೆ ಸದಸ್ಯ ವರುಣ್ ಚೌಟ ಮಾತನಾಡಿ, ಶಾಸಕ ಡಾ. ಭರತ್ ಶೆಟ್ಟಿ ಅವರ ಮುತುವರ್ಜಿಯಿಂದ ವಿಶೇಷ ಅನುದಾನ ಬಿಡುಗಡೆಯಾಗಿದೆ. ಈ ಹಿಂದೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಹಿಂಭಾಗದ ರಸ್ತೆ ಕಾಂಕ್ರೀಟೀಕರಣಕ್ಕೂ ಕ್ರಮ ಕೈಗೊಳ್ಳಲಾಗಿದೆ. ಸ್ಥಳೀಯ ನಾಗರಿಕರ ಪರವಾಗಿ ಶಾಸಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.


ಈ ಸಂದರ್ಭ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿ, ಸರ್ಕಾರದ ಅನುದಾನ ಬಿಡುಗಡೆಯಾಗದಿರುವುದು ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್‌ಎಆರ್ ಅನುದಾನ ಬಳಸಿಕೊಂಡು ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕಾಮಗಾರಿ ನಡೆಯುವ ಸಂದರ್ಭ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.


ಈ ಸಂದರ್ಭ ಪದ್ಮನಾಭ ಸುವರ್ಣ, ಉಮೇಶ್ ಮೂಡುಪಟ್ನ, ಜಗನ್ನಾಥ್ ದೇವಾಡಿಗ, ಪ್ರೊ. ಕೃಷ್ಣಮೂರ್ತಿ, ಅಶೋಕ್ ದೇವಾಡಿಗ, ಲೀಲಾವತಿ, ಅರುಣ್ ಭಟ್, ರಾಮನಾಥ್ ಕೋಡಿಕೆರೆ, ಕೆಂಚನೂರು ಬಾಲಕೃಷ್ಣ ಶೆಟ್ಟಿ, ಅನುಪಮ, ಪ್ರಜ್ವಲ್ ಶೆಟ್ಟಿ, ಮನೋಜ್, ಸಚಿನ್ ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top