ಹಾಸನ: ಕಥೆ ಕವಿತೆ ಸಾಹಿತ್ಯ ಮತ್ತು ಚಿತ್ರಕಲೆ ಒಂದಕ್ಕೊಂದು ಪರಸ್ಪರ ಪೂರಕವಾಗಿದೆ. ಒಂದು ಕಥೆ ಕಾದಂಬರಿ ಕವಿತೆಗಳ ಸಾರವನ್ನು ಒಂದು ಚಿತ್ರಕಲೆ ಅಭಿವ್ಯಕ್ತಿಸುತ್ತದೆ. ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವು ಕನ್ನಡ ಪುಸ್ತಕ ಪ್ರಾಧಿಕಾರದ ಒಂದು ಉತ್ತಮ ಕಾರ್ಯವಾಗಿದೆ. ಓದುವ ಅಭಿರುಚಿಯನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ. ಪುಸ್ತಕ ಕೊಂಡು ಓದಿ ಸಂಗ್ರಹಿಸಿ ಅವುಗಳನ್ನು ಇತರರಿಗೂ ಓದಲು ಎರವಲು ಕೊಡುವುದು ಉತ್ತಮ ಆಶಯವಾಗಿದೆ ಎಂದು ಸಾಹಿತಿ ಗೊರೂರು ಅನಂತರಾಜು ಹೇಳಿದರು.
ಇವರು ಇತ್ತೀಚೆಗೆ ಹಾಸನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರದ ಆಶ್ರಯದಲ್ಲಿ ನಡೆದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಪ್ರಾಧ್ಯಾಪಕ ಡಾ. ಕುಶಲ್ ಬರಗೂರು ಮಾತನಾಡಿ ಜಿಲ್ಲೆಯಲ್ಲಿ ಉತ್ತಮ ಮಟ್ಟದಲ್ಲಿ ಈ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸುವ ಆಶಯ ಹೊಂದಿದ್ದು ಕವಿಗಳು ಸಾಹಿತಿಗಳು ಲೇಖಕರು ತಮ್ಮ ಮನೆಗಳಲ್ಲಿ ಸಂಗ್ರಹಿಸಿರುವ ಪುಸ್ತಕಗಳ ಮಾಹಿತಿ ನೀಡಿದರೆ ಅವರ ಮನೆಯಲ್ಲಿ ಅವರನ್ನು ಗೌರವಿಸಿ ಅವರ ಕೃತಿ ಕುರಿತಂತೆ ಉಪನ್ಯಾಸ ಏರ್ಪಡಿಸುವ ಆಶಯವಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಹಾಸನ ಜಿಲ್ಲಾ ಮಾಜಿ ಅಧ್ಯಕ್ಷರು ಮತ್ತು ಪತ್ರಕರ್ತರು ಉದಯರವಿ, ಕದಂಬ ಸೈನ್ಯ ಕನ್ನಡ ಸಂಘಟನೆ ಹಾಸನ ಜಿಲ್ಲಾಧ್ಯಕ್ಷರು ಮತ್ತು ನಿವೃತ್ತ ಪ್ರಾಂಶುಪಾಲರು ಗಣೇಶ್ ಅಂಕಪುರ ಭಾಗವಹಿಸಿದ್ದರು. ಬಿ. ಎಸ್. ದೇಸಾಯಿ ದಂಪತಿಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಸನ್ಮಾನಿಸಿ ಅಭಿನಂದನೆ ಪತ್ರ ನೀಡಲಾಯಿತು. ಗೊರೊರು ಶ್ರೀಕಾಂತ್ ಪ್ರಾರ್ಥಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


