ಡಾ.ಗಿರೀಶ್ ಭಾರದ್ವಾಜ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

Upayuktha
0

 .




ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತಾಂತ್ರಿಕ ಸಲಹಾ ಸಮಿತಿಯಲ್ಲಿ ಹತ್ತು ವರ್ಷಗಳ ಕಾಲ ನಿರ್ದೇಶಕರಾಗಿದ್ದ ತೂಗುಸೇತುವೆಯ ಸರದಾರ, ಬ್ರಿಜ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನ ಹೊಂದಿದರು.


ದೇಶಾದ್ಯಂತ ಸುಮಾರು 160ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ನದಿ, ಕೊಳ, ಹಳ್ಳಗಳಿಂದಾಗಿ ಮುಖ್ಯವಾಹಿನಿಯೊಂದಿಗೆ ಸಂಪರ್ಕ ಕಳೆದುಕೊಂಡಿರುವ ಜನರಿಗೆ ಇವರು ಆಶಾಕಿರಣರಾಗಿದ್ದರು. ಕರ್ನಾಟಕ ಮಾತ್ರವಲ್ಲದೆ ಕೇರಳ, ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರಗಳಿಗೂ ತಮ್ಮ ಸೇವಾ ವ್ಯಾಪ್ತಿಯನ್ನು ವಿಸ್ತರಿಸಿದ್ದು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಕಡಿಮೆ ವೆಚ್ಚದಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುತ್ತಿದ್ದುದು ವಿಶೇಷವಾಗಿತ್ತು. ಇವರ ಸಾಧನೆಗೆ 2017ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಇವರು ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸದಾ ಸ್ಪೂರ್ತಿಯ ಸೆಲೆಯಾಗಿದ್ದರು.


ಅಗಲಿದ ಈ ಮಹಾನ್ ಚೇತನಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲಿ ಎಂದು ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಭಾವಪೂರ್ಣ ಶ್ರದ್ದಾಂಜಲಿಯನ್ನು ಸಮರ್ಪಿಸಿದ್ದಾರೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top