ಶಾಸಕ ವೇದವ್ಯಾಸ ಕಾಮತ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್

Upayuktha
0

 



ಮಂಗಳೂರು: ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿತು.


ಕಳೆದ ವರ್ಷ ಮಾರ್ಚ್ ನಲ್ಲಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಇದೊಂದು ರಾಜಕೀಯ ಪ್ರೇರಿತ ದುರುದ್ದೇಶದ ಪ್ರಕರಣವಾಗಿತ್ತು. ಮಾನ್ಯ ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನನ್ನ ಸಹಿತ ಅನೇಕ ಬಿಜೆಪಿ ಶಾಸಕರು, ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಾಗಿದೆ. ಆದರೆ ಸುಳ್ಳಿನ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂಬುದು ಈ ತೀರ್ಪಿನಿಂದ ಸಾಬೀತಾಗಿದೆ ಎಂದರು. ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top