ಮಂಗಳೂರು: ನಗರದಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಮಳೆಯ ಕಾರಣಕ್ಕೆ ಕಂಕನಾಡಿ ಸಮೀಪ ತಡೆಗೋಡೆ ಕುಸಿದು ಮನೆಯೊಂದರ ಮೇಲ್ಛಾವಣಿಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಇಬ್ಬರು ಮಕ್ಕಳು ಅಸುನೀಗಿರುವುದು ಹೃದಯ ವಿದ್ರಾವಕ ಘಟನೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಸಂತಾಪ ವ್ಯಕ್ತಪಡಿಸಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ ಮೃತಪಟ್ಟ ಕುಟುಂಬದವರಿಗೆ ಸೂಕ್ತ ಪರಿಹಾರ ಲಭಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಶೀಘ್ರ ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಸಂಪೂರ್ಣ ಚಿಕಿತ್ಸೆಯ ವೆಚ್ಚವನ್ನು ರಾಜ್ಯ ಸರ್ಕಾರವೇ ನೋಡಿಕೊಳ್ಳಬೇಕು. ಹವಾಮಾನ ಇಲಾಖೆಯ ಪ್ರಕಾರ ಮಳೆಯ ಪ್ರಮಾಣ ಇನ್ನೂ ಮುಂದುವರಿಯಲಿದ್ದು ಈಗಾಗಲೇ ಅಪಾಯಕಾರಿ ಎಂದು ಗುರುತಿಸಲಾಗಿರುವ ಪ್ರದೇಶಗಳಲ್ಲಿ ವಾಸಿಸುವ ಜನರ ಬಗ್ಗೆ ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಸಾರ್ವಜನಿಕರೂ ಎಚ್ಚರಿಕೆ ವಹಿಸಬೇಕು ಎಂದು ಶಾಸಕರು ಹೇಳಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


