ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

Upayuktha
0



ಉಜಿರೆ: "ದೈನಂದಿನ ಜೀವನದ ಸರಳ ವ್ಯಾಪಾರ-ವಹಿವಾಟಿನಿಂದ ಹಿಡಿದು ಬಾಹ್ಯಾಕಾಶ ತಂತ್ರಜ್ಞಾನದವರೆಗೆ ಪ್ರತಿಯೊಂದು ರಂಗದಲ್ಲೂ ಗಣಿತದ ಪಾತ್ರ ಅತ್ಯಂತ ಅನಿವಾರ್ಯವಾಗಿದೆ" ಎಂದು ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಇ.ಆಂಡ್.ಸಿ (E&C) ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಮಿತ್ ಕೆ. ಜೈನ್ ಹೇಳಿದರು.


ಅವರು ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಗಣಿತ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ‘ಸಿಗ್ಮಾ’ ಅಸೋಸಿಯೇಷನ್-ನ ಉದ್ಘಾಟನೆ ಮಾಡಿ ನಂತರ “ಖರೀದಿಯಿಂದ ಬಾಹ್ಯಾಕಾಶ ಎಂಜಿನಿಯರಿಂಗ್‌ವರೆಗೆ ಗಣಿತದ ಪಾತ್ರ” ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ನೀಡಿದರು.


ಈ ವೇಳೆ ದೈನಂದಿನ ಜೀವನದಲ್ಲಿ ಗಣಿತದ ಅನ್ವಯಿಕತೆ, ತಾಂತ್ರಿಕ ಪ್ರಗತಿಯಲ್ಲಿ ಅದರ ಕೊಡುಗೆ ಹಾಗೂ ಗಣಿತ ಕಲಿಕೆಯಿಂದ ದೊರೆಯುವ ಉದ್ಯೋಗಾವಕಾಶಗಳ ಕುರಿತು ಪ್ರಾಯೋಗಿಕ ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.


ಇ-ಮ್ಯಾಗಝಿನ್ ಬಿಡುಗಡೆ

ಇದೇ ಸಂದರ್ಭದಲ್ಲಿ ಗಣಿತ ವಿಭಾಗದ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಹಾಗೂ ಗಣಿತಾಸಕ್ತಿಯಿಂದ ಸಿದ್ಧಪಡಿಸಿದ ಇ- ಮ್ಯಾಗಝಿನ್ ಹಾಗೂ ಭಿತ್ತಿ ಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣಿತ ವಿಭಾಗದ ಮುಖ್ಯಸ್ಥ ಹಾಗೂ ಕಾಲೇಜಿನ ಪರೀಕ್ಷಾಂಗದ ಕುಲಸಚಿವರಾದ ಗಣೇಶ್ ನಾಯಕ್ ಬಿ. ವಹಿಸಿದ್ದರು. ವಿದ್ಯಾರ್ಥಿನಿ ಕೃತಿ ಪ್ರಾರ್ಥಿಸಿದರು. ಶಿಲ್ಪಾ ಸ್ವಾಗತಿಸಿ, ವಿದ್ಯಾರ್ಥಿನಿ ನಮ್ರತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top