ತುಂಗಭದ್ರಾ ಡ್ಯಾಮ್ ಹೊಳಹರಿವುನಲ್ಲಿ ಹೆಚ್ಚಳ

Upayuktha
0

 



ಬಳ್ಳಾರಿ ಜು.10: ವಿಜಯನಗರ, ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯನ ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆ ಆಗಿದೆ.


ತುಂಗಭದ್ರಾ ಜಲಾಶಯಕ್ಕೆ 44,782 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 1,633.00 ಅಡಿ ಇದ್ದು. ಶುಕ್ರವಾರ ಜಲಾಶಯದ ನೀರಿನ ಮಟ್ಟ 1,596.66 ಅಡಿ ತಲುಪಿದೆ. ಜಲಾಶಯದ ನೀರಿನ ಸಂಗ್ರಹ ಮಟ್ಟ 17.511 ಟಿಎಂಸಿ ಗೆ ಏರಿಕೆ ಆಗಿದೆ. 

ಜಲಾಶಯದ ಕಾಲುವೆಗಳ ಮೂಲಕ ಮಾತ್ರ 180 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಕಳೆದ ಮೂರು ದಿನದ ಅವದಿಯಲ್ಲಿ ಜಲಾಶಯದಲ್ಲಿ 4 ಅಡಿ ನೀರು ಹೆಚ್ಚಣವಾಗಿದೆ.

ಕಳೆದ ವರ್ಷ ಜಲಾಶಯದ ನೀರಿನ ಮಟ್ಟ 1624.83 ಅಡಿ ಇತ್ತು. ಜಲಾಶಯದಲ್ಲಿ 75.934 ಟಿಎಂಸಿ ನೀರಿನ ಸಂಗ್ರಹವಿತ್ತು. 45,955 ಕ್ಯೂಸೆಕ್ ನೀರಿನ ಒಳ ಹರಿವು ಇತ್ತು.

ಕಳೆದ ಎರಡು ಮೂರು ದಿನಗಳಿಂದ ಜಲಾಶಯದ ಒಳ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು. ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಒಳ ಹರಿವಿನ ಪ್ರಮಾಣ ಇನ್ನು ಹೆಚ್ಚಳವಾಗಲಿದೆ ಎಂದು ತುಂಗಭದ್ರಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಭತ್ತಿ ಹೋಗಿದ್ದ ತುಂಗಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದರಿಂದ ಜಲಾಶಯಕ್ಕೆ ಹೊಸ ಕಳೆ ಬಂದಂತಾಗಿದೆ.


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top