ಶಿಕ್ಷಣದೊಂದಿಗೆ ಕೌಟುಂಬಿಕ ಮೌಲ್ಯಗಳ ಅಳವಡಿಕೆ ಅಗತ್ಯ: ಡಾ. ಕಲ್ಲಡ್ಕ ಪ್ರಭಾಕರ ಭಟ್

Upayuktha
0



ಮುಂಡಾಜೆ: "ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು ಇಲ್ಲಿನ ಸನಾತನ ಪರಂಪರೆ, ಸಂಸ್ಕೃತಿ, ಭಾರತದ ಭವ್ಯ ವೈಭವವನ್ನು ಸಾರುವ ಶಿಕ್ಷಣದೊಂದಿಗೆ ಗುರು ಹಿರಿಯರನ್ನು ಗೌರವಿಸುವ ಗುಣಗಳನ್ನು ಹಾಗೂ ಕೌಟುಂಬಿಕ ಮೌಲ್ಯಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ" ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅಭಿಪ್ರಾಯಪಟ್ಟರು.


ಅವರು ಗುರುವಾರ (ಜು.16) ನಡೆದ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ರಕ್ಷಕ ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ  ಇದರ ಅಧ್ಯಕ್ಷ ವಿನಯ ಚಂದ್ರ, ಕಾಲೇಜಿನ ಸಂಚಾಲಕ ನಾರಾಯಣ ಫಡ್ಕೆ, ಪ್ರಾಂಶುಪಾಲೆ ಗೀತಾ ವೇದಿಕೆಯಲ್ಲಿ ಉಪಸಿತರಿದ್ದರು.


ಸರಸ್ವತಿ ವಂದನೆಯೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಸಂಸ್ಥೆಯ ಹಾಗೂ ಇಲಾಖೆಯ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು. ಮನಶಾಸ್ತ್ರ ಉಪನ್ಯಾಸಕಿ ನಮಿತಾ ಕೆ ಆರ್ ಪ್ರತಿಭಾ ಪುರಸ್ಕಾರವನ್ನು ನಿರ್ವಹಿಸಿದರು. ವಿದ್ಯಾರ್ಥಿನಿಯರಾದ ಜನೀಕ್ಷಾ ಸ್ವಾಗತಿಸಿ, ದೀಕ್ಷಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಭರತ್ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top