ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ಅತ್ಯಗತ್ಯ: ಕಾವ್ಯ ಎಂ

Upayuktha
0

 


ಉಜಿರೆ: ವಿದ್ಯಾರ್ಥಿಗಳಿಗಳು ಕಲಿಕೆಯ ಜೊತೆಗೆ ಆತ್ಮವಿಶ್ವಾಸ ಬೆಳೆಸಿಕೊಂಡು, ವಿದ್ಯಾರ್ಥಿ ದೆಸೆಯಲ್ಲಿ ಸಿಗುವ ಪ್ರತಿಯೊಂದು ಅವಕಾಶವನ್ನು ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಮನಃಶಾಸ್ತ್ರ ವಿಭಾಗದಿಂದ ಆಯೋಜಿಸುವ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸಿ ಅದರ ಪ್ರಯೋಜನ ಪಡೆದುಕೊಳ್ಳಬೇಕು  ಎಂದು ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹ ಪ್ರಧ್ಯಾಪಕಿ ಕಾವ್ಯ ಎಂ ಹೇಳಿದರು. 


ಅವರು ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ ವಿಭಾಗದ ವತಿಯಿಂದ ಸಮ್ಯಗ್ದರ್ಶನ ಸಭಾಭವನದಲ್ಲಿ  ಬುಧವಾರ ಹಮ್ಮಿಕೊಂಡಿದ್ದ 'ಕಾಗ್ನಿಟೋ' ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದರು. 


ವಿದ್ಯಾರ್ಥಿಗಳು ತಮ್ಮ ಆಸಕ್ತ ಕ್ಷೇತ್ರದಲ್ಲಿ ನಿರಂತರವಾಗಿ ಕ್ರಿಯಾಶೀಲತೆ ಮತ್ತು ಭಿನ್ನತೆ ರೂಢಿಸಿಕೊಳ್ಳಬೇಕು. ಪ್ರಾಯೋಗಿಕ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲಾ ವಿಭಾಗದ ಡೀನ್ ಡಾ. ಬೋಜಮ್ಮ ಕೆ ಎನ್ ಮಾತನಾಡಿ, ಪ್ರಸ್ತುತ ದಿನಮಾನಾಗಳ ಜಂಜಾಟದ ಬದುಕಿನಲ್ಲಿ ತಮ್ಮ ಮನಸ್ಸನ್ನು ಸ್ಥಿರತೆಯಿಂದ ಇಟ್ಟುಕೊಳ್ಳುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ಮನಃಶಾಸ್ತ್ರ ವಿಭಾಗ ನಿರಂತರವಾಗಿ ಸಾಮಾಜಿಕ ಜಾಗೃತಿ ಮೂಡಿಸುತ್ತಿದೆ. ಜೊತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತವಾಗಿ ಹಮ್ಮಿಕೊಳ್ಳುತ್ತಾ ಬರುತ್ತಿದೆ. ವಿದ್ಯಾರ್ಥಿಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಿ ಎಂದು ಹೇಳಿದರು. 


ನೂತನವಾಗಿ ಆಯ್ಕೆಯಾದ ಕಾಗ್ನಿಟೋ ಅಸೋಸಿಯೇಷನ್ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಮನಃಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ವಂದನಾ ಜೈನ್ ಪ್ರತಿಜ್ಞಾ ವಿಧಿ ಬೋಧಿಸಿದರು. 


ಕಾರ್ಯಕ್ರಮದಲ್ಲಿ ಮನಃಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸುಧೀರ್ ಕೆ ವಿ, ಸಹಾಯಕಿ ಪ್ರಧ್ಯಾಪಕಿ ಪದ್ಮಶ್ರೀ ಕೆ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಕಾರ್ಯಕ್ರಮಕ್ಕೆ ವಿದ್ಯಾರ್ಥಿ ಪ್ರತಿನಿಧಿ ದಿವ್ಯಲಕ್ಷ್ಮಿ ಸ್ವಾಗತಿಸಿ, ಅಲಕಾ ನಿರೂಪಿಸಿ, ವಿದ್ಯಾರ್ಥಿ ಆನಂದ್ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top