ಜವಾಹರ ನವೋದಯ ವಿದ್ಯಾಲಯ : 6 ನೇ ತರಗತಿ ಪ್ರವೇಶಾತಿ – ಅರ್ಜಿ ಆಹ್ವಾನ

Upayuktha
0

 



    ಉಡುಪಿ: ಜಿಲ್ಲೆಯ ಹೆಬ್ರಿಯ ಚಾರಾದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2027-28 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಯ ಪ್ರವೇಶಾತಿಗಾಗಿ, 5 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಮೀಪದ ಜವಾಹರ್ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದಾಗಿದೆ.

   

ಆಸಕ್ತ ವಿದ್ಯಾರ್ಥಿಗಳು ತಾವು ಓದುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರಿಂದ ಅವಶ್ಯಕ ದಾಖಲೆಗಳನ್ನು ಪಡೆದು ಜುಲೈ 31 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ನವೆಂಬರ್ 28 ರಂದು ಪ್ರವೇಶ ಪರೀಕ್ಷೆಯು ನಡೆಯಲಿದೆ.

  

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಅಥವಾ ಕಚೇರಿಯ ದೂ.ಸಂಖ್ಯೆ: 08253-251260 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಿದ್ಯಾಲಯದ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top