ಜಯನಗರ: ನಂಜನಗೂಡು ರಾಯರ ಮಠದಲ್ಲಿ ಮಾಧವ ಗಾಯನ ಸೇವೆ

Upayuktha
0

 


ಬೆಂಗಳೂರು: ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಜಯನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರದ ಪ್ರಯುಕ್ತ ಬೆಳಿಗ್ಗೆ ವಿಶೇಷ ಪೂಜಾ ಕೈಂಕರ್ಯಗಳು, ಅನ್ನದಾನ ಸೇವೆಗಳು ಜರುಗಿದವು.


ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ ತೊಟ್ಟಿಲು ಸೇವೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವ ಗಾಯಕ ಮಾಧವ ಎಂ. ನಾಡಿಗೇರ ಅವರು ಹಲವಾರು ಅಪರೂಪದ ಹರಿದಾಸರ ಪದಗಳನ್ನು ಸುಶ್ರಾವ್ಯವಾಗಿ ಹಾಡಿ, ನೆರೆದಿದ್ದ ದಾಸ ಸಾಹಿತ್ಯಾಭಿಮಾನಿಗಳ ಮನಸೂರೆಗೊಂಡರು.



ಇವರ ಗಾಯನಕ್ಕೆ ಹಾರ್ಮೋನಿಯಂ ವಾದನದಲ್ಲಿ ರಾಮು ಕೊಡೇಕಲ್, ತಬಲಾ ವಾದನದಲ್ಲಿ ಭೀಮಾಶಂಕರ ಹೇಮನೂರು ಮತ್ತು ತಾಳದಲ್ಲಿ ಮಾ|| ಆದಿತ್ಯ ಸಾಥ್ ನೀಡಿದರು. ಈ ಕಾರ್ಯಕ್ರಮಗಳು ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ನೆರವೇರಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top