ಕಳತ್ತೂರಿನಲ್ಲಿ 2080ನೇ ಮದ್ಯವರ್ಜನಾ ಶಿಬಿರ: ವರ್ಣರಂಜಿತ ಸಾಂಸ್ಕೃತಿಕ ಕಲಾ ವೈಭವ

Upayuktha
0

 



ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ಮಂಜೇಶ್ವರ ತಾಲೂಕು), ಕಿದೂರು ಶ್ರೀ ಮಹಾದೇವ ನವಜೀವನ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಒಕ್ಕೂಟದ ಆಶ್ರಯದಲ್ಲಿ 2080ನೇ ಮದ್ಯವರ್ಜನಾ ಶಿಬಿರವು ಕಳತ್ತೂರು ಶ್ರೀ ಮಹಾದೇವ ಸಭಾಭವನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು.


ಮನಸೆಳೆದ ಕಲಾ ವೈಭವ

ಈ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ, ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.) ಕಾಸರಗೋಡು ಸಂಸ್ಥೆಯ ಕಲಾವಿದರು ನಡೆಸಿಕೊಟ್ಟ 'ಸಾಂಸ್ಕೃತಿಕ ಕಲಾ ವೈಭವ' ಶಿಬಿರಾರ್ಥಿಗಳ ಹಾಗೂ ಪ್ರೇಕ್ಷಕರ ಮನರಂಜಿಸುವಲ್ಲಿ ಯಶಸ್ವಿಯಾಯಿತು. ಗುರುರಾಜ್ ಕಾಸರಗೋಡು ಅವರ ಸಂಯೋಜನೆ ಮತ್ತು ನಿರೂಪಣೆಯಲ್ಲಿ ಮೂಡಿಬಂದ ಈ ಪ್ರದರ್ಶನವು ಅತ್ಯಂತ ವರ್ಣರಂಜಿತವಾಗಿ ಮೂಡಿಬಂದಿತು.


ಕಾರ್ಯಕ್ರಮದ ಸಮಾರೋಪದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಸಮಾಜ ಸೇವಕ ಶ್ರೀ ಮಂಜುನಾಥ ಆಳ್ವ ಮಡ್ವ, ಯಕ್ಷಗಾನ ಕಲಾವಿದ ಜಯರಾಮ ಪಾಟಾಳಿ, ಶಿಬಿರಾಧಿಕಾರಿ ರಮೇಶ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಭಾಗವಹಿಸಿದ ಸಂಸ್ಥೆಯ ಕಲಾವಿದರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುರುರಾಜ್ ಕಾಸರಗೋಡು ಅವರಿಗೆ ಶಾಲು ಹೊದೆಸಿ ವಿಶೇಷವಾಗಿ ಸನ್ಮಾನಿಸಲಾಯಿತು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top