ಕಾರ್ಗಿಲ್ ವಿಜಯ ದಿವಸ: ನಿವೃತ್ತ ಸೈನಿಕರಿಗೆ ಸನ್ಮಾನ

Upayuktha
0

 


ಮಂಗಳೂರು: ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಸಹಯೋಗದೊಂದಿಗೆ, ಮಂಡಲದ ಯುವ ಮೋರ್ಚಾ ನೇತೃತ್ವದಲ್ಲಿ, 31 ನೇ ವಾರ್ಡಿನ ಶಕ್ತಿಕೇಂದ್ರ ಪ್ರಮುಖರು, ನಿವೃತ್ತ ಸೈನಿಕರು ಹಾಗೂ ಬಿಜೈ ಆನೆಗುಂಡಿ ನಿವಾಸಿ ನಾರಾಯಣ್ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.


ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಶ್ರೀಯುತರು ಇಡೀ ಬಿಜೈ ಪರಿಸರದ ಸಾರ್ವಜನಿಕರೊಂದಿಗೆ ಉತ್ತಮ ಭಾಂಧವ್ಯ ಹೊಂದಿರುವವರು. ಯಾರು ಬರಲಿ, ಬಿಡಲಿ ಪಕ್ಷದ ಕಾರ್ಯಕ್ಕಾಗಿ ಮನೆ ಮನೆಯ ಸಂಪರ್ಕವೆಂದರೆ ಸದಾ ಮುಂಚೂಣಿಯಲ್ಲಿ ನಿಲ್ಲುವವರು. ಸೈನಿಕನಾಗಿದ್ದರಿಂದಲೇ ಈ ಶಿಸ್ತು ಅವರಲ್ಲಿ ಮೂಡಿರಬಹುದು. ಇಂತಹ ಕಾರ್ಯಕರ್ತರಿಂದಲೇ ನಮ್ಮ ಪಕ್ಷವು ಇಂದು ಈ ಮಟ್ಟಕ್ಕೆ ಬೆಳೆದಿರುವುದು. ಇವರನ್ನು ಸನ್ಮಾನಿಸುವ ಭಾಗ್ಯ ನಮ್ಮದಾಗಿರುವುದಕ್ಕೆ ಅತ್ಯಂತ ಸಂತೋಷವಿದೆ ಎಂದರು.


ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಜಿಲ್ಲಾ ಕಾರ್ಯದರ್ಶಿಗಳಾದ ಪೂರ್ಣಿಮಾ, ಮಂಡಲದ ಯುವ ಮೋರ್ಚಾ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿಗಳಾದ ರಿತ್ವಿಕ್ ಕದ್ರಿ, ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ ರಾವ್, ಮಂಡಲದ ಪ್ರಭಾರಿ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಗುರುಚರಣ್, ಪ್ರಮುಖರಾದ ರವಿಶಂಕರ್ ಮಿಜಾರ್, ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೇಲ್, ಕಿರಣ್ ರೈ, ಸೇರಿದಂತೆ ಬಿಜೆಪಿ ಜಿಲ್ಲೆ ಹಾಗೂ ಮಂಡಲದ ವಿವಿಧ ಪದಾಧಿಕಾರಿಗಳು, ಸದಸ್ಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top