ಪುತ್ತೂರು: ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಇಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಗಿಲ್ ಯುದ್ಧದಲ್ಲಿ ಭಾರತದ ಸಶಸ್ತ್ರ ಪಡೆಗಳ ವೀರಗಾಥೆಯನ್ನು ಸ್ಮರಿಸುತ್ತಾ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರ ಯೋಧರಿಗೆ ಈ ಸಂದರ್ಭದಲ್ಲಿ ನಮನ ಸಲ್ಲಿಸಲಾಗುವುದು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಹಾಗೂ ವಿದ್ಯಾರ್ಥಿಗಳೊಂದಿಗೆ ವಿಶೇಷ ಸಂವಾದ ನಡೆಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ಅಧ್ಯಕ್ಷ ರವೀಂದ್ರ ಪಿ. ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಕಾರ್ಯದರ್ಶಿ ವಿಜಯನಾರಾಯಣ ಕೆ. ಎಂ. ಭಾಗವಹಿಸಲಿದ್ದಾರೆ.
ವಿಶೇಷ ಸಂವಾದ
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂಸದ ಕಾಪ್ಟನ್ ಬ್ರಿಜೇಶ್ ಚೌಟ ವಿಶೇಷ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ಸದಸ್ಯರು, ಉಪನ್ಯಾಸಕ-ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


