ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ: ಜು.5ರಂದು ದ.ಕ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ

Upayuktha
0

 


ಮಂಗಳೂರು: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹರಾದ ಡಾ. ಎಸ್.ಆರ್. ರಂಗನಾಥನ್ ಅವರಿಂದ ಸ್ಥಾಪಿತವಾದ KALA, ಬೆಂಗಳೂರನ್ನು ಕೇಂದ್ರವಾಗಿಸಿಕೊಂಡು ರಾಜ್ಯದಾದ್ಯಂತ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದ ಶಿಕ್ಷಣ, ಸಂಶೋಧನೆ, ಪ್ರಕಟಣೆ ಹಾಗೂ ವೃತ್ತಿಪರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ.


ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ (ರಿ.), ಬೆಂಗಳೂರು ಇದರ ದಕ್ಷಿಣ ಕನ್ನಡ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 2026ರ ಜುಲೈ 5ರಂದು (ಭಾನುವಾರ) ಮಧ್ಯಾಹ್ನ 3.00 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಕಟ್ಟಡದಲ್ಲಿರುವ ನಾಲೆಜ್ ಸೆಂಟರ್ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ರೆವ. ಫಾ. ಡಾ. ಮೈಕೆಲ್ ಲಿಗೋರಿ ಸಂತುಮಯೋರ್ ಉದ್ಘಾಟಿಸಲಿದ್ದಾರೆ. ಮಂಗಳೂರು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ಶ್ರೀ ರಾಘವೇಂದ್ರ ಕೆ.ವಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಶೇಖರ ಎಚ್.ಪಿ. ಗೌರವ ಅತಿಥಿಯಾಗಿ ಉಪಸ್ಥಿತರಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷರಾದ ಡಾ. ಎಸ್. ಎಲ್. ಕಡದೇವರಮಠ ವಹಿಸಲಿದ್ದಾರೆ.


ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದ್ದು, ಗ್ರಂಥಾಲಯ ಕ್ಷೇತ್ರಕ್ಕೆ ನೀಡಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಪ್ರೊ. ವಿ.ಜಿ. ತಳವಾರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.


ಗ್ರಂಥಪಾಲಕರು, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.


ಈ ಮಾಹಿತಿಯನ್ನು ಅಧ್ಯಕ್ಷರು, ಡಾ. ವಿಶಾಲ ಬಿ ಕೆ ಹಾಗೂ ಡಾ. ಸುಪ್ರೀತಾ ಜೆ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ (ರಿ.), ದಕ್ಷಿಣ ಕನ್ನಡ ಘಟಕ ಪತ್ರಿಕೆಯ ಪ್ರಕಟಣೆಯಲ್ಲಿ ತಿಳಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top