ಕಾಸರಗೋಡು: ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ) ಕಾಸರಗೋಡು ಇವರ 228ನೇ ಕಾರ್ಯಕ್ರಮವಾಗಿ ಜನಪದ ಗೀತಗಾಯನ ಎಂಬ ಅರ್ಥಪೂರ್ಣ ಕಾರ್ಯಕ್ರಮವು ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದಲ್ಲಿ ಜೂನ್ 30ರಂದು ಪ್ರಕೃತಿ ಆಯುರ್ವೇದ ಚಿಕಿತ್ಸಾಲಯ ಶ್ರೀ ಗಿರಿ ಸದನ ಚೂರಿಪ್ಪಳ್ಳ ನೆಲ್ಲಿಕಟ್ಟೆಯ ಶಿವದುರ್ಗಾ ವೇದಿಕೆಯಲ್ಲಿ ನಡೆಯಿತು.
ಸಂಘದ ಕೋಶಾಧಿಕಾರಿ ಡಾ. ವೆಂಕಟಗಿರೀಶ್ ಉದ್ಘಾಟನೆ ನೆರವೇರಿಸಿ ಪ್ರಸ್ತುತ ಸಮಯದಲ್ಲಿ ಜನಪದ ಸಾಹಿತ್ಯದ ಉಳಿವಿನ ಅಗತ್ಯತೆಯ ಬಗ್ಗೆ ಉದ್ಘಾಟನಾ ನುಡಿಗಳನ್ನಾಡಿದರು. ಹಿರಿಯರು ಹಾಗೂ ಸಂಘದ ಉಪಾಧ್ಯಕ್ಷರಾದ ಶ್ರೀ ಅಚ್ಚುತ ಭಟ್ ಜಾನಪದ ಕಥೆಗಳನ್ನು ಹೇಳಿದರು. ಸಂಘದ ಅಧ್ಯಕ್ಷರಾದ ಡಾ. ವಾಣಿಶ್ರೀ ಕಾಸರಗೋಡು ಕಾರ್ಯಕ್ರಮ ಸಂಯೋಜಿಸಿ ನಿರೂಪಿಸುತ್ತಾ ಜನಪ್ರಿಯ ಜಾನಪದ ಹಾಡುಗಳಿಗೆ ಧ್ವನಿಯಾದರು. ಸಂಘದ ಕಾರ್ಯದರ್ಶಿ ಶ್ರೀ ಸುರೇಶ್ ಉಡುಪಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಕಲಾವಿದರಾದ ಡಾ. ವಾಣಿಶ್ರೀ ಕಾಸರಗೋಡು, ಭವಿತ್, ಲಕ್ಷ್ಮೀಶ, ಹರ್ಷಿತ್ ಮತ್ತು ಅಹಿಷ್ ಇವರಿಂದ ಜಾನಪದ ನೃತ್ಯಗಳು ಮೇಳೈಸಿದವು. ಕಾರ್ಯಕ್ರಮದಲ್ಲಿ ಕಲಾವಿದರಿಗೆ ಪುಸ್ತಕ ಮತ್ತು ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


