ಬೆಳಗಾವಿ: ಇಲ್ಲಿನ ನಾಗರ ಮುನ್ನೋಳಿಯ ಕವಿತ್ತ ಕರ್ಮಮಣಿ ಫೌಂಡೇಷನ್ ಆಶ್ರಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ, ಯುವಕರಿಗೆ, ಯುವತಿಯರಿಗೆ, ಮಹಿಳೆಯರಿಗೆ ವಿದ್ಯಾವಿಭೂಷಣ ಪ್ರಶಸ್ತಿ, ಸಾಹಿತ್ಯ ವಿಭೂಷಣ ಪ್ರಶಸ್ತಿ, ಜ್ಞಾನ ವಿಭೂಷಣ ಪ್ರಶಸ್ತಿ, ಕವಿ ಭೂಷಣ ಪ್ರಶಸ್ತಿ, ಕಲಾ ವಿಭೂಷಣ ಪ್ರಶಸ್ತಿಗಳನ್ನು ವಿತರಿಸಲಾಗುವುದು ಜೊತೆಗೆ ರಾಜ್ಯ ಮಟ್ಟದ ಕವಿಗೋಷ್ಠಿಯನ್ನು ಅಂತರ್ಜಾಲದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಗೌರವ ಸಲಹೆಗಾರರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಆಸಕ್ತ ಕಲಾವಿದರು, ಶೈಕ್ಷಣಿಕ ಸಾಧಕರು, ಸಮಾಜ ಸೇವೆ, ರಂಗಭೂಮಿ, ವೈದ್ಯಕೀಯ, ಚಿತ್ರಕಲೆ, ನೃತ್ಯ, ಸಂಗೀತ ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಅವಕಾಶ ವಂಚಿತರಾದ ಯುವ, ಯುವತಿಯರಿಗೆ ಈ ವಿವಿಧ ಪ್ರಶಸ್ತಿಗಳನ್ನು ವಿತರಿಸುತ್ತೇವೆ ಎಂದು ಕವಿತ್ತ ಕರ್ಮಮಣಿ ಫೌಂಡೇಷನ್ ಸಂಸ್ಥಾಪಕರಾದ ಕವಿತ್ತ ಕರ್ಮಮಣಿ ಪ್ರಕಟಿಸಿದ್ದಾರೆ.
2026 ಜುಲೈ 31ರೊಳಗೆ 9743867298 ಈ ಸನೀಹವಾಣಿಗೆ ಸಂಪರ್ಕಿಸಿ ಹೆಸರು ನೊಂದಾಯಿಸಬಹುದು ಅಂತರ್ಜಾಲ ರಾಜ್ಯ ಮಟ್ಟದ ಕವಿಗೋಷ್ಠಿಗೆ ಈ ಮೇಲಿನ ಸನೀಹವಾಣಿಗೆ ಸಂಪರ್ಕಿಸಿ ಕವಿಗೋಷ್ಠಿಯಲ್ಲಿ ಭಾಗವಹಿಸಬಹುದು ಎಂದು ಸಂಸ್ಥೆಯ ಪದಾಧಿಕಾರಿಗಳು ವಿನಂತಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


