ಅಂಬಿಕಾ ನೀಟ್ ಅಕಾಡೆಮಿ ಪ್ರಾಂಶುಪಾಲರಾಗಿ ಕೇಶವ ಕಿಶೋರ್ ಆಯ್ಕೆ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತತ ಅಂಬಿಕಾ ನೀಟ್ ಅಕಡೆಮಿಯ ನೂತನ ಪ್ರಾಂಶುಪಾಲರಾಗಿ ಕೇಶವ ಕಿಶೋರ್ ಅವರು ನೇಮಕಗೊಂಡಿರುತ್ತಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಶಿಕ್ಷಣ ಸಂಸ್ಥೆಯಲ್ಲಿ ಕೇಶವ ಕಿಶೋರ್ ಅವರನ್ನು ಪ್ರಾಂಶುಪಾಲರಾಗಿ ಘೋಷಿಸಿ, ಅಭಿನಂದಿಸಿದರು. 


ನಂತರ ಮಾತನಾಡಿದ ಅವರು ಉಜ್ವಲ ಭವಿಷ್ಯದ ಕನಸನ್ನು ಕಟ್ಟಿಕೊಂಡು ಬಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ಅತ್ಯುತ್ಕೃಷ್ಟ ಮಟ್ಟದ ಶಿಕ್ಷಣವನ್ನು ಅಂಬಿಕಾ ನೀಟ್ ಅಕಾಡೆಮಿ ಕಳೆದ ಕೆಲ ವರ್ಷಗಳಿಂದ ನಿರ್ವಹಿಸಿಕೊಂಡು ಬರುತ್ತಿದೆ. ಮುಖ್ಯವಾಗಿ ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣ ಪಡೆಯಲು ಉತ್ಸಾಹ ಇರುವ ವಿದ್ಯಾರ್ಥಿಗಳನ್ನು ನೀಟ್ ಹಾಗೂ ಜೆಇಇ ಪರೀಕ್ಷೆಗೆ ಸಜ್ಜುಗೊಳಿಸಲಾಗುತ್ತಿದೆ ಎಂದರು.


ಅಂಬಿಕಾ ಶಿಕ್ಷಣ ಸಂಸ್ಥೆಗಳು ಆರಂಭದಿಂದಲೂ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯಕ್ಕೆ ತಕ್ಕಂತೆ ಶಿಕ್ಷಣ ನೀಡುವ ಕೆಲಸಗಳನ್ನು ಮಾಡುತ್ತಿವೆ. ಅಂಬಿಕಾ ನೀಟ್ ಅಕಾಡೆಮಿಯೂ ಇದರ ಮುಂದುವರಿದ ಭಾಗವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಆಡಳಿತ ಮಂಡಳಿ ಮಾರ್ಗದರ್ಶನದಲ್ಲಿ ಶಿಕ್ಷಕರು ವಿವಿಧ ರೀತಿಯ ತರಬೇತಿಗಳನ್ನು ನೀಡುತ್ತಿದ್ಧಾರೆ. ವರ್ಷದಿಂದ ವರ್ಷಕ್ಕೆ ಫಲಿತಾಂಶದಲ್ಲಿ ಪ್ರಗತಿಯನ್ನು ಸಂಸ್ಥೆ ಹೊಂದುತ್ತಿದೆ ಎಂದು ನುಡಿದರಲ್ಲದೆ ವಿದ್ಯಾರ್ಥಿಗಳು ಭಾರತ ದೇಶದ ಸಂಪನ್ಮೂಲ ಬಳಸಿಕೊಂಡು, ವಿದ್ಯಾರ್ಜನೆಯ ಬಳಿಕ ವಿದೇಶಗಳಿಗೆ ತೆರಳುವುದಕ್ಕೆ ಆದ್ಯತೆ ನೀಡಬಾರದು. ದೇಶದ ಹಿತಕ್ಕೆ ಬೇಕಾಗುವ ಕ್ಷೇತ್ರಗಳಲ್ಲಿ ತೊಡಗಿಕೊಂಡು ಉದ್ಯೋಗ ನಡೆಸುವ ಮೂಲಕ ದೇಶ ಸೇವೆ ಮಾಡಬೇಕು. ಈ ಮೂಲಕ ದೇಶದ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.


ಜವಾಬ್ದಾರಿ ಸ್ವೀಕರಿಸಿ ಮಾತನಾಡಿದ ಅಂಬಿಕಾ ನೀಟ್ ಅಕಾಡೆಮಿಯ ಪ್ರಾಂಶುಪಾಲ ಕೇಶವ ಕಿಶೋರ್, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಉಪನ್ಯಾಸಕರು, ಪೋಷಕರು, ವಿದ್ಯಾರ್ಥಿಗಳ ಸಹಕಾರದೊಂದಿಗೆ ಅಕಾಡೆಮಿ ಇನ್ನಷ್ಟು ಉತ್ತಮ ಸಾಧನೆ ಮಾಡುವ ವಿಶ್ವಾಸವಿದೆ ಎಂದರು. 


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ., ಉಪನ್ಯಾಸಕರಾದ ಶೈನಿ, ಜಯಶ್ರೀ, ರಾಮಪ್ರಸಾದ್, ಜಯಂತಿ ಪಿ. ಮೊದಲಾದವರು ಉಪಸ್ಥಿತರಿದ್ದರು. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top