ಸುರತ್ಕಲ್: ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿದಾಗ ಮಹಾತ್ಮಾ ಗಾಂಧೀಜಿಯವರ ಪರಿಕಲ್ಪನೆ ಯ ಸ್ವಚ್ಛ ಭಾರತ ರೂಪುಗೊಳ್ಳಲು ಸಾಧ್ಯ ಎಂದು ಸುರತ್ಕಲ್ ನ ಎಂ. ಆರ್. ಪಿ. ಎಲ್. ನ ಸಿ. ಎಸ್. ಆರ್. ವಿಭಾಗದ ಚೀಫ್ ಮ್ಯಾನೇಜರ್ ಎಂ. ಕೆ. ರಾವ್ ನುಡಿದರು.
ಅವರು ಎಂ ಆರ್. ಪಿ. ಎಲ್. ನ ಸ್ವಚ್ಛತಾ ಪಕ್ವಾಡದ ಅಂಗವಾಗಿ ನಾಗರಿಕ ಸಲಹಾ ಸಮಿತಿ ಸುರತ್ಕಲ್ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆ ಯಲ್ಲಿ ಆಯೋಜಿಸಿದ್ದ ಅಡುಗೆ ಮನೆಯ ತ್ಯಾಜ್ಯ ನಿರ್ವಹಣೆ ಮತ್ತು ಏಕಬಳಕೆ ಪ್ಲಾಸ್ಟಿಕ್ ಬಗ್ಗೆ ಅರಿವು ಕಾರ್ಯಗಾರ ಮತ್ತು ಸೆಣಬಿನ ಚೀಲ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.
ಎಂ. ಆರ್. ಪಿ. ಎಲ್. ನ ಸಿ. ಎಸ್. ಆರ್. ವಿಭಾಗ ದ ಅಧಿಕಾರಿ ಕೇಶವ ಪಾಠಾಳಿ ಸ್ವಚ್ಛತಾ ಪ್ರತಿಜ್ಞೆ ಬೋಧಿಸಿ ಸ್ವಚ್ಛತಾ ಅರಿವಿನ ಕುರಿತು ಎಂ. ಆರ್. ಪಿ. ಎಲ್. ನಿರಂತರವಾಗಿ ಕಾರ್ಯಕ್ರಮ ರೂಪಿಸುತ್ತಿದೆ ಎಂದರು.
ಸುರತ್ಕಲ್ ನಾಗರಿಕ ಸಲಹಾ ಸಮಿತಿಯ ಕಾರ್ಯದರ್ಶಿ ಸತೀಶ್ ಸದಾನಂದ ರಸ್ತೆ ಬದಿ ಯಲ್ಲಿ ಕಸ ಎಸೆಯುವವರಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವರಿಗೆ ದಂಡ ವಿಧಿಸಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ಯನ್ನು ಕಡಿಮೆ ಗೊಳಿಸ ಬೇಕು. ಅಡುಗೆ ಮನೆಯ ಹಸಿ ತ್ಯಾಜ್ಯ ವನ್ನು ಉತ್ತಮ ಗೊಬ್ಬರ ವನ್ನಾಗಿ ಪರಿವರ್ತನೆ ಮಾಡಲು ಸಾಧ್ಯ ಎಂಬು ದನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿ ಕೊಟ್ಟರು.
ನಮ್ಮ ಟಿ. ವಿ. ಯ ಹಿರಿಯ ನಿರೂಪಕ ಪ್ರಕಾಶ್ ಪುತ್ತೂರು, ಹಾಗೂ ಸುರತ್ಕಲ್ ರೋಟರಿ ಕ್ಲಬ್ ನಿರ್ದೇಶಕ ಕೃಷ್ಣಮೂರ್ತಿ, ವಿದ್ಯಾ ನಿಧಿ ಎಜುಕೇಶನ್ ಟ್ರಸ್ಟ್ ನ ಕೋಶಾಧಿಕಾರಿ ವಿಠ್ಠಲ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಜೇನ್ ಡಿ ಸೋಜಾ ಉಪಸ್ಥಿತರಿದ್ದರು.
ವಿದ್ಯಾ ನಿಧಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ ದರು. ಶಿಕ್ಷಕರಕ್ಷಕ ಸಂಘ ದ ಪದಾಧಿಕಾರಿಗಳು ಮತ್ತು ಸದಸ್ಯರು, ವಿದ್ಯಾರ್ಥಿಗಳು ಕಾರ್ಯಗಾರ ದ ಪ್ರಯೋಜನ ವನ್ನು ಪಡೆದು ಕೊಂಡರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


