ಮಂಗಳೂರ ಸಮಾಚಾರದ ಕೊಡುಗೆ ಚಾರಿತ್ರಿಕ: ಎಂ.ಎ‌. ಗಫೂರ್

Upayuktha
0

ಪತ್ರಿಕಾ ದಿನಾಚರಣೆ- ಮೊಗ್ಲಿಂಗ್ ಸ್ಮರಣೆ 


ಮಂಗಳೂರು: ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ 'ಮಂಗಳೂರ ಸಮಾಚಾರ' ಹಾಗೂ ಆ ಪತ್ರಿಕೆಯ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕವಾದದ್ದು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್  ಹೇಳಿದರು.


ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಡಾ.‌ಹರ್ಮನ್ ಮೊಗ್ಲಿಂಗ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. 


ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಮೊಗ್ಲಿಂಗ್ ಅವರು ಜೈಮಿನಿ ಭಾರತ, ಬಸವ ಪುರಾಣ, ದಾಸ ಸಾಹಿತ್ಯವನ್ನು ಸಂಪಾದಿಸಿ ಪ್ರಕಟಿಸುವ ಮೂಲಕ ಮಾಧ್ಯಮ ಕ್ಷೇತ್ರದ ಜೊತೆಗೆ ಕನ್ನಡ ಸಾಹಿತ್ಯ ಲೋಕಕ್ಕೆ ಅಪೂರ್ವ ಕೊಡುಗೆಗಳನ್ನು ನೀಡಿದವರು ಎಂದು ಹೇಳಿದರು.


ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಂ.ವಾಟ್ಸನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ  ಪಿ.ಬಿ.ಹರೀಶ್ ರೈ, ಕೆಜೆಯು  ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್  ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.


ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ಕೆಜೆಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿಪ್ರಕಾಶ್ ಪುಣಚ, ಕೋಶಾಧಿಕಾರಿ ಕೆನ್ಯೂಟ್ ಪಿಂಟೊ, ಪತ್ರಕರ್ತರಾದ ಭಾಸ್ಕರ ರೈ ಕಟ್ಟ, ಡೊನಾಲ್ಡ್‌ ಪಿರೇರಾ, ಎಡ್ವರ್ಡ್ ಲೋಬೊ, ಶಾರುಖ್, ಹಮೀದ್ ವಿಟ್ಲ,  ಥಿಯೋಲೋಜಿಕಲ್ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೆಜೆಯು ಜಿಲ್ಲಾಧ್ಯಕ್ಷ‌ ಈಶ್ವರ ವಾರಣಾಶಿ ಸ್ವಾಗತಿಸಿ, ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top