ಕಾಂತಾವರ: ಕಳೆದ ನಲುವತ್ತೆಂಟು ವರುಷಗಳಿಂದ ಮುದ್ದಣ ಕಾವ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವ ಕಾಂತಾವರ ಕನ್ನಡ ಸಂಘವು 2026ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ. ಪ್ರಶಸ್ತಿಯು ರೂಪಾಯಿ ಹತ್ತುಸಾವಿರ (10000/-) ನಗದು, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ.
ಆಸಕ್ತರು ಹೆಚ್ಚಿನ ಮಾಹಿತಿಯನ್ನು ಕನ್ನಡ ಸಂಘ kannadasanghakanthavara@gmail.comಎನ್ನುವ ಮೈಲ್ ಐಡಿ ಮೂಲಕ ಪಡೆದುಕೊಳ್ಳಬಹುದು. ಇಲ್ಲವೇ ಅಧ್ಯಕ್ಷರನ್ನು (9900701666) ಅಥವಾ ಪ್ರಧಾನ ಕಾರ್ಯದರ್ಶಿ ಅವರನ್ನು (9008978366) ಮೇಲಿನ ದೂರವಾಣಿಯಲ್ಲಿ ಸಂಪರ್ಕಿಸಬಹುದು. ಹಸ್ತಪ್ರತಿಗಳ ಸ್ವೀಕಾರಕ್ಕೆ ಕೊನೆಯ ದಿನಾಂಕ ಸಪ್ಟಂಬರ 15. ಪ್ರಶಸ್ತಿ ಘೋಷಣೆ ನವಂಬರ 1 ಎಂದು ಕನ್ನಡ ಸಂಘದ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


