ಜುಲೈ 25ರಂದು ನಿಟ್ಟೆಯಲ್ಲಿ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ

Upayuktha
0

 


ಕಾರ್ಕಳ: ಉಡುಪಿ ಜಿಲ್ಲೆಯ ಸಂಸ್ಕೃತಿ, ಪರಂಪರೆ, ಐತಿಹಾಸಿಕ ವೈಭವ ಹಾಗೂ ಜೀವಂತ ಸಾಂಸ್ಕೃತಿಕ ವೈಶಿಷ್ಟ್ಯವನ್ನು ಪ್ರತಿಬಿಂಬಿಸುವ ಉಡುಪಿಯ ಅಧಿಕೃತ ಪ್ರವಾಸೋದ್ಯಮ ಮ್ಯಾಸ್ಕಾಟ್ (Tourism Mascot) ವಿನ್ಯಾಸಗೊಳಿಸುವ ಸ್ಪರ್ಧೆಯು ಜುಲೈ 25ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಆ್ಯಂಫಿಥಿಯೇಟರ್‌ನಲ್ಲಿ ನಡೆಯಲಿದೆ.

ಈ ಸ್ಪರ್ಧೆಯಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಕಲಾ ಶಿಕ್ಷಕರು ಹಾಗೂ ಶಾಲಾ ಶಿಕ್ಷಕರು ಭಾಗವಹಿಸಬಹುದಾಗಿದೆ. ಉಡುಪಿಯ ಸಮೃದ್ಧ ಸಂಸ್ಕೃತಿ, ಪರಂಪರೆ, ಸಂಪ್ರದಾಯ ಹಾಗೂ ವಿಶಿಷ್ಟತೆಯನ್ನು ಸೃಜನಾತ್ಮಕವಾಗಿ ಅಭಿವ್ಯಕ್ತಿಸುವ ಮ್ಯಾಸ್ಕಾಟ್‌ನ್ನು ರೂಪಿಸಲು ಸ್ಪರ್ಧಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾಗುವ ವಿನ್ಯಾಸವು ಉಡುಪಿ ಪ್ರವಾಸೋದ್ಯಮದ ಅಧಿಕೃತ ಗುರುತಾಗಿ ಬಳಕೆಯಾಗುವ ಅವಕಾಶವನ್ನು ಪಡೆಯಲಿದೆ.

ಭಾಗವಹಿಸಲು ಆಸಕ್ತರು ನೋಂದಣಿ ಲಿಂಕ್ https://forms.gle/GJMTAhoGBLUAnjLb9 ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಎಂ. ಸಿಂಚನಾ ಸುಭಾಸ್ (ಮೊ.: 8747862899) ಅವರನ್ನು ಸಂಪರ್ಕಿಸಬಹುದು.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top