ದಾವಣಗೆರೆ: ನಗರದ ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಆಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಪ್ರತೀ ತಿಂಗಳ ಹುಣ್ಣಿಮೆಯೆಂದು ನಡೆಸುವ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ಗುರು ಪೂರ್ಣಿಮೆ ಅಂಗವಾಗಿ ದಿನಾಂಕ 29-7-2026 ರಂದು ಬುಧವಾರ ಬೆಳಿಗ್ಗೆ 7-00ಕ್ಕೆ ನಡೆಯಲಿದೆ ಎಂದು ಶ್ರೀ ಗಾಯಿತ್ರಿ ಪರಿವಾರದ ಅಧ್ಯಕ್ಷ ವಾಸುದೇವ ಲಕ್ಷ್ಮಣ್ ರಾಯ್ಕರ್ ತಿಳಿಸಿದ್ದಾರೆ.
ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದಲ್ಲಿ ನಡೆಯಲಿರುವ ಸಮಾರಂಭದ ಈ ಬಾರಿಯ ಪೂಜಾ ಸೇವಾಕರ್ತರಾದ ಪರಿವಾರದ ಗೌರವ ಅಧ್ಯಕ್ಷ ಡಾ|| ರಮೇಶ್ ಪಾಟೀಲ್ ಮತ್ತು ಕುಟುಂಬ ಹಾಗೂ ಹಾವೇರಿಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ವೀರಮಲ್ಲಪ್ಪ ಪೂಜಾರ್ ಮತ್ತು ಕುಟುಂಬದವರು ಆಧ್ಯಾತ್ಮಿಕ ಪರಂಪರೆಯ ಸೇವೆ ಸಲ್ಲಿಸುತ್ತಿದ್ದಾರೆ.
ಕಳೆದ ಇಪ್ಪತ್ತಾರು ವರ್ಷಗಳಿಂದಲೂ ನಿರಂತರವಾಗಿ ಪ್ರತೀ ಪೂರ್ಣಿಮೆಯಂದು ನಡೆಯುವ ಈ ಧಾರ್ಮಿಕ ಪ್ರಕ್ರಿಯೆಯಲ್ಲಿ ಆಸಕ್ತ ಸಾರ್ವಜನಿಕರು ಯಾವುದೇ ಜಾತಿ, ಮತ, ವರ್ಣ, ಲಿಂಗ ಬೇಧವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿ ಗೊಳಿಸಬೇಕಾಗಿ ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


