ಮೂಡುಬಿದಿರೆ: ಜವಾಹರಲಾಲ್ ನೆಹರು ಪ್ರೌಢಶಾಲೆಯ ಕ್ರೀಡಾ ಸಂಘದ ಉದ್ಘಾಟನೆ

Upayuktha
0





ಮೂಡುಬಿದಿರೆ: ಜವಾಹರಲಾಲ್ ನೆಹರು ಪ್ರೌಢಶಾಲೆಯ ಕ್ರೀಡಾ ಸಂಘದ ಉದ್ಘಾಟನೆಯು ಇತ್ತೀಚೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಗೋವರ್ಧನ ಎಂ. ಇವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಯಿತು. ಶಾಲಾ ಹಳೆ ವಿದ್ಯಾರ್ಥಿ ಮೂಡುಬಿದಿರೆ ಠಾಣೆಯಲ್ಲಿ ಅರಕ್ಷಕರಾದ ಮಹಮ್ಮದ್ ಇಕ್ಬಾಲ್ ಕಾರ್ಯಕ್ರಮ ಉದ್ಘಾಟಿಸಿದರು. ಮೂಡಬಿದಿರೆಯ ಹರಿಪ್ರಸಾದ್ ಅತಿಥಿಗಳಾಗಿ ಭಾಗವಹಿಸಿದ್ದರು.


10ನೇ ತರಗತಿಯ ಶ್ರಾವ್ಯ ಸ್ವಾಗತಿಸಿದರು. 9ನೇ ತರಗತಿಯ ತ್ರಿಶಾ ವಂದಿಸಿದರು. 10ನೇ ತರಗತಿಯ ಸಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಸಂಘದ ವಿದ್ಯಾರ್ಥಿಗಳು ಕ್ರೀಡೆಗೆ ಸಂಬಂಧಿಸಿದಂತೆ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು.


ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಾವಿತ್ರಿ ಹಾಗೂ ಶಿಕ್ಷಕಿಯರಾದ ಶ್ರೀಮತಿ ಮಾಲತಿ, ಶ್ರೀಮತಿ ಶ್ವೇತಾ, ಶ್ರೀಮತಿ ಪುಷ್ಪಾವತಿ ಇವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top