ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಎನ್‌ಡಿಎ ತರಗತಿ ಉದ್ಘಾಟನೆ

Upayuktha
0

ಯುವ ಜನತೆ ರಾಷ್ಟ್ರದ ಅಖಂಡತೆಯನ್ನು ಕಾಪಾಡಬೇಕು : ಕರ್ನಲ್ ಗೋಪಾಲಕೃಷ್ಣ ಭಟ್



ಪುತ್ತೂರು: ಭಾರತವು ಸಾವಿರಾರು ವರ್ಷಗಳ ಶ್ರೀಮಂತ ಸಂಸ್ಕೃತಿ, ಮೌಲ್ಯಗಳು ಮತ್ತು ಪರಂಪರೆಯನ್ನು ಹೊಂದಿರುವ ದೇಶವಾಗಿದೆ. ಈ ಸಂಸ್ಕೃತಿ ಮತ್ತು ರಾಷ್ಟçದ ಅಖಂಡತೆಯನ್ನು ಕಾಪಾಡುವ ಮಹತ್ತರ ಜವಾಬ್ದಾರಿ ಯುವಜನರ ಮೇಲಿದೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಎಂಬುದು ಕೇವಲ ಉದ್ಯೋಗದ ಅವಕಾಶವಲ್ಲ; ಅದು ರಾಷ್ಟ್ರಸೇವೆ, ಶಿಸ್ತು, ತ್ಯಾಗ, ನಾಯಕತ್ವ ಮತ್ತು ದೇಶಭಕ್ತಿಯ ಜೀವನಮಾರ್ಗವಾಗಿದೆ ಎಂದು ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಗೋಪಾಲಕೃಷ್ಣ ಭಟ್ ದಿವಾಣ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ನಟ್ಟೋಜ ಶಿವಾನಂದ ರಾವ್ - ಸುಶೀಲಾ ರಾವ್ ಸಭಾಂಗಣದಲ್ಲಿ ಎನ್‌ಡಿಎ (ನ್ಯಾಶನಲ್ ಡಿಫೆನ್ಸ್ ಅಕಾಡೆಮಿ) ಕೋಚಿಂಗ್ ತರಗತಿಗಳನ್ನು ಉದ್ಘಾಟಿಸಿ ಭಾನುವಾರ ಮಾತನಾಡಿದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ದೇಶ ಮೊದಲು ಎಂಬ ಧ್ಯೇಯದೊಂದಿಗೆ ನಾವು ರಾಷ್ಟ್ರಸೇವೆ, ಶಿಸ್ತು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದೊಂದಿಗೆ ಸಂಸ್ಕಾರ, ದೇಶಭಕ್ತಿ, ಸೇವಾ ಮನೋಭಾವ ಮತ್ತು ಶಿಸ್ತನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿದಾಗ ಸಮಾಜಕ್ಕೆ ಉತ್ತಮ ನಾಗರಿಕರು ಹಾಗೂ ರಾಷ್ಟçಕ್ಕೆ ಸಮರ್ಥ ನೇತಾರರು ದೊರೆಯುತ್ತಾರೆ. ಎನ್‌ಡಿಎ ತರಗತಿಗಳ ಆರಂಭವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಮತ್ತು ದೇಶಸೇವೆಯ ಮನೋಭಾವವನ್ನು ಬೆಳೆಸುವ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು. 


ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ ಎಸ್, ಉಪಪ್ರಾಂಶುಪಾಲ ಪ್ರದೀಪ್ ಕೆ. ವೈ  ಉಪಸ್ಥಿತರಿದ್ದರು. 


ವಿದ್ಯಾರ್ಥಿನಿಯರಾದ ಸ್ನೇಹಾ ಪಿ. ರಾವ್ ಹಾಗೂ ಧನ್ಯಶ್ರೀ ಪ್ರಾರ್ಥಿಸಿದರು. ಥಾನ್ಯ ಕೆ. ಗೋಳ್ವರ್ಕರ್ ಸ್ವಾಗತಿಸಿ, ಇಂಚರಾ ಬಿ.ಡಿ. ಅತಿಥಿ ಪರಿಚಯ ಮಾಡಿಕೊಟ್ಟರು. ಹಿತೈಷಿಣಿ ಎಸ್. ವಂದಿಸಿ, ಮನ್ವಿತಾ ಎಂ. ನಿರೂಪಿಸಿದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top