ರಾಷ್ಟ್ರ ಮಟ್ಟದ ಕ್ರೀಡಾಪಟು, ಅಂಬಿಕಾದ ಪ್ರತೀಕ್ಷಾ ಶೆಣೈಗೆ ಸನ್ಮಾನ

Upayuktha
0

 


ಪುತ್ತೂರು: ಮಂಗಳೂರಿನ ಕರ್ನಾಟಕ ಸರ್ಕಾರ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪ್ರಾಂಶುಪಾಲರ ಸಂಘ (ರಿ) ಹಾಗೂ ಮಂಗಳೂರಿನ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಆಶ್ರಯದಲ್ಲಿ ಮಂಗಳೂರಿನ ಎ.ಜೆ ಇಂಜಿನಿಯರಿಂಗ್ ಹಾಗೂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಹಾಗೂ ರಾಷ್ಟ್ರಮಟ್ಟದ ಕ್ರೀಡಾ ಪಟುಗಳ ಅಭಿನಂದನಾ ಸಮಾರಂಭದಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಗೌರವ ಸನ್ಮಾನವನ್ನು  ಸ್ವೀಕರಿಸಿದರು.

 

ಈ ಸಂದರ್ಭದಲ್ಲಿ ಬೆಂಗಳೂರು ಪ.ಪೂ.ಶಿಕ್ಷಣ ಇಲಾಖೆ ಕ್ರೀಡಾ ವಿಭಾಗ ಸಹಾಯಕ ನಿರ್ದೇಶಕ ಶಿವಾಮಾದಯ್ಯ, ಪ.ಪೂ.ಶಿ.ಇಲಾಖೆ ಪ್ರಭಾರ ಉಪ ನಿರ್ದೇಶಕಿ ಜಯಶ್ರೀ, ಕಿಟ್ಟೆಲ್ ಪ.ಪೂ ಕಾಲೇಜು ಪ್ರಾಂಶುಪಾಲ ವಿಠ್ಠಲ್, ನಾಲ್ಯಪದವು ಸರ್ಕಾರಿ ಪ.ಪೂ ಕಾಲೇಜು ಪ್ರಾಂಶುಪಾಲ ಜಯಾನಂದ ಸುವರ್ಣ, ರಾಜ್ಯ ಕ್ರೀಡಾ ಸಂಯೋಜಕ ಗೋಪಾಲ್, ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮ್ ಶೆಟ್ಟಿ, ಎ.ಜೆ ತಾಂತ್ರಿಕ ಮಹಾವಿದ್ಯಾಲಯ ಕ್ಯಾoಪಸ್ ನಿರ್ದೇಶಕ ಡಾ.ಜಿ ಜಯಪ್ರಕಾಶ್ ರಾವ್, ಪ್ರಭಾರ ಪ್ರಾಂಶುಪಾಲ ಡಾ.ಸಿ ಮಹಾಬಲೇಶ್ವರಪ್ಪ, ಅಡ್ಮಿಶನ್ ಮತ್ತು ಪ್ರಮೋಷನ್ ವಿಭಾಗ ಡೀನ್ ಡಾ.ರಾಜೇಶ್ ರೈ, ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ ಉಪ ಪ್ರಾಂಶುಪಾಲ ಪ್ರದೀಪ್ ಕೆ ವೈ ಹಾಗೂ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top