ಕೆಎಸ್‌ಸಿಎಸ್‌ಟಿ ವಿದ್ಯಾರ್ಥಿ ಯೋಜನೆ ಕಾರ್ಯಕ್ರಮ: ಅತ್ಯುತ್ತಮ ಪ್ರದರ್ಶನ ತೋರಿದ ಕಾಲೇಜಾಗಿ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ

Upayuktha
0

 



ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಆಯೋಜಿಸಿದ್ದ 49ನೇ ಸರಣಿಯ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಯೋಜನಾ ಕಾರ್ಯಕ್ರಮದ (SPP) ರಾಜ್ಯ ಮಟ್ಟದ ಪ್ರದರ್ಶನ ಮತ್ತು ಪೋಸ್ಟರ್ ಮಂಡನೆಯಲ್ಲಿ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ‘ವರ್ಷದ ಅತ್ಯುತ್ತಮ ಪ್ರದರ್ಶನ ತೋರಿದ ಕಾಲೇಜು' ಎಂದು ಗುರುತಿಸಲ್ಪಟ್ಟಿದೆ. ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಡೆದ ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಈ ಮಾನ್ಯತೆಯನ್ನು ನೀಡಲಾಯಿತು.


ಈ ಪ್ರತಿಷ್ಠಿತ ಮನ್ನಣೆಯ ಜೊತೆಗೆ, ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾದ 472 ಪ್ರಾಜೆಕ್ಟ್ಗಳ ಪೈಕಿ ಸಂಸ್ಥೆಯ ನಾಲ್ಕು ವಿದ್ಯಾರ್ಥಿ ಪ್ರಾಜೆಕ್ಟ್ಗಳು ‘ಅತ್ಯುತ್ತಮ ಪ್ರಾಜೆಕ್ಟ್' ಪ್ರಶಸ್ತಿಗಳನ್ನು ಪಡೆದಿವೆ. ಈ ಸಾಧನೆ, ಸಂಸ್ಥೆಯು ನಾವೀನ್ಯತೆ, ಸಂಶೋಧನೆ ಮತ್ತು ಯೋಜನಾ ಆಧಾರಿತ ಕಲಿಕೆಯನ್ನು ಉತ್ತೇಜಿಸುವಲ್ಲಿ ಹೊಂದಿರುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಸಂಸ್ಥೆಯ ಪ್ರಾಂಶುಪಾಲ ಡಾ. ಹೆಚ್.ಸಿ. ನಾಗರಾಜ್ ತಿಳಿಸಿದರು.


ಸಂಸ್ಥೆಯ ಆಡಳಿತ ಮಂಡಳಿಯು, ವಿದ್ಯಾರ್ಥಿ ತಂಡಗಳು, ವಿದ್ಯಾರ್ಥಿ ಯೋಜನೆ ಕಾರ್ಯಕ್ರಮದ (SPP) ಸಂಯೋಜಕ ಡಾ. ಶಶಿಧರ್ ಕೆ.ಎಸ್., ಆಯಾ ವಿಭಾಗದ ಮುಖ್ಯಸ್ಥರಿಗೆ ಮತ್ತು ಉಪನ್ಯಾಸಕರಿಗೆ ಈ ಸಾಧನೆಗಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top