ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷ ಭರತ್ ಎನ್ ಆಚಾರ್ಯ ಅಧಿಕೃತ ಭೇಟಿ

Upayuktha
0




ಉಡುಪಿ: ಜೆಸಿಐ ಭಾರತ ವಲಯ 15 ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರಾದ ಭರತ್ ಎನ್ ಆಚಾರ್ಯ ರವರು ಅಧಿಕೃತ ಭೇಟಿ ನೀಡಿ ಅನೇಕ ಶಾಶ್ವತ ಯೋಜನೆಗಳಿಗೆ ಚಾಲನೆ ನೀಡಿದರು.


ಇಂದಿರಾನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು (ಜು. 12) ನಡೆದ ಕಾರ್ಯಕ್ರಮದಲ್ಲಿ ಇಂದಿರಾ ನಗರ ಶಾಲೆಗೆ ಕಲರ್ ಪ್ರಿಂಟರ್, ವನಸುಮ ಟ್ರಸ್ಟ್ ಮತ್ತು ವನಸುಮ ವೇದಿಕೆ ಕಟಪಾಡಿ ಪ್ರಯೋಜಕತ್ವದಲ್ಲಿ ಕಾಪು ಕಾಳಿಕಾಂಬ ದೇವಸ್ಥಾನ ಭವನಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಅದೇ ರೀತಿ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ವಿಶೇಷ ಬಾಟಲಗಳನ್ನು ಹಸ್ತಾಂತರ ಮಾಡಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಅವರು ಜೆಸಿಐ ನಿರ್ದಿಷ್ಟ ಬೇಡಿಕೆಗೆ ಅನುಗುಣವಾಗಿ ಮತ್ತು ಅತ್ಯಂತ ಅಗತ್ಯವಾದ ವಿವಿಧ ಯೋಜನೆಗಳನ್ನು ನೀಡುತ್ತಿದೆ. ಹೀಗಾಗಿ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಜೇಸಿಐ ಉಡುಪಿ ಸಿಟಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಅಭಿನಂದನೀಯ ಎಂದರು.


 ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಉಡುಪಿ ಸಿಟಿ ಅಧ್ಯಕ್ಷೆ ಪಲ್ಲವಿ ಕೊಡಗು ವಹಿಸಿದ್ದರು. ವೇದಿಕೆಯಲ್ಲಿ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ, ಆಡಳಿತ ವಿಭಾಗ ನಿರ್ದೇಶಕ ಸುಹಾಸ್ ಮರಿಕೆ, ವಲಯ ಉಪಾಧ್ಯಕ್ಷೆ ಡಾ.ಹರಿಣಾಕ್ಷಿ ಕಕೇ೯ರ, ಪದಾಧಿಕಾರಿಗಳಾದ ಶೀರಾಜ್ ಆಚಾಯ೯,

ಸಮಿಯಾ ಹೆಗ್ಡೆ, ಕಾರ್ಯಕ್ರಮದ ನಿರ್ದೇಶಕ ಬಾಸುಮಾ ಕೊಡಗು, ಕಾವ್ಯವಾಣಿ ಕೊಡಗು, ಪೂರ್ವ ಅಧ್ಯಕ್ಷರಾದ ಸಂದೀಪ್ ಕುಮಾರ್, ಉದಯ್ ನಾಯ್ಕ್, ಜಗದೀಶ್ ಶೆಟ್ಟಿ ಕೀಳಂಜೆ, ರಾಘವೇಂದ್ರ ಕರ್ವಾಲು, ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ವಲಯ ಅಧಿಕಾರಿಗಳು ಜೆಸಿಐ ಉಡುಪಿ ಸಿಟಿ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು, ವನಸುಮ ಟ್ರಸ್ಟ್ ಇದರ ಸರ್ವ ಸದಸ್ಯರು ಉಪಸ್ಥಿತರಿದ್ದರು.


ಶಾಲೆಯ ವತಿಯಿಂದ ಮಕ್ಕಳು ವಿಶಿಷ್ಟ ರೀತಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರನ್ನು ಸ್ವಾಗತಿಸಿದ್ದು ಕಂಡು ಬಂತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top