ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಓರಿಯಂಟೇಶನ್ ಕಾರ್ಯಕ್ರಮ

Upayuktha
0

 


 

ಮಂಗಳೂರು: ಕೋಣಾಜೆಯ ಪಿ.. ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ  ಓರಿಯೆಂಟೇಶನ್ ಕಾರ್ಯಕ್ರಮ   ಪೇಸ್ ನಾಲೆಡ್ಜ್ ಸಿಟಿಯ ಆಡಿಟೋರಿಯಂನಲ್ಲಿ ಬುಧವಾರ ನಡೆಯಿತು‌‌. ಪಿ.. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ರಮೀಝ್ ಎಂ.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜು ಜೀವನದಲ್ಲಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಪಿ.. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫ್ರಾಝ್ ಜೆ. ಹಾಸಿಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 

ಅಂತರರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ, ಕೇರಳದ ಸಂಸ್ಥಾ ಸಹಭಾಗಿತ್ವ ವಿಭಾಗದ ಮುಖ್ಯಸ್ಥ ಶರತ್ ವೇಣುಗೋಪಾಲ್ ಹಾಗೂ ಐಎಸ್ಡಿಸಿ ಯುಕೆ ಪ್ರಾದೇಶಿಕ ವ್ಯವಸ್ಥಾಪಕಿ ನಂದಾದೇವಿ ಕೆ.ವಿ. ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ. ಸಲೀಮುಲ್ಲಾ ಖಾನ್, ಡಾ. ಅಫೀಫಾ ಸಲೀಮ್, ಡಾ. ಸಯ್ಯಿದ್ ಅಮೀನ್ ಅಹ್ಮದ್, ಮುಹಮ್ಮದ್ ಫೈಝಲ್ ಎನ್., ಡಾ. ಇಕ್ಬಾಲ್, ಪ್ರೊ. ಇಸ್ಮಾಈಲ್ ಖಾನ್, ಶರಫುದ್ದೀನ್ ಪಿ.ಕೆ., ಹಾರೀಸ್ ಟಿ.ಡಿ., ಶಫಿನಾಝ್ ಸಯ್ಯಿದ್ ಇಸ್ಮಾಈಲ್ ಮೊದಲಾದವರು ಉಪಸ್ಥಿತರಿದ್ದರು.

 

ಉಪಪ್ರಾಂಶುಪಾಲ ಡಾ. ಜಿ. ಹರಿಕೃಷ್ಣನ್ ಸ್ವಾಗತಿಸಿ ಸಹಾಯಕ ಪ್ರಾಧ್ಯಾಪಕಿ ಮುನೀರಾ . ವಂದಿಸಿದರು. ಸಹಾಯಕ ಪ್ರಾಧ್ಯಾಪಕರಾದ ಖೈರುನ್ನೀಸಾ, ಅಲೀಮಾ ನಬೀಲಾ, ನಜ್ಲಾ ಮರಿಯಮ್ ನಿರೂಪಿಸಿದರು

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top